10 Milagres de Jesus na Bíblia: Lista com versículos e explicação
Os milagres de Jesus são muito mais do que demonstrações de poder sobrenatural; eles são sinais que confirmam sua divindade e missão. Ao longo dos Evangelhos, vemos Cristo curando enfermos, dominando a natureza e vencendo a morte.
Neste guia, selecionamos 10 milagres de Jesus na Bíblia, organizados com referências e uma breve explicação sobre o impacto espiritual de cada um deles.
Os principais milagres de Jesus nos Evangelhos
1. Transformação da Água em Vinho
Referência: João 2:1-11
Explicação: Ocorreu nas Bodas de Caná. Sendo o seu primeiro milagre público, Jesus demonstrou autoridade sobre a matéria e a natureza, revelando sua glória aos discípulos e abençoando a instituição da família.
ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ
ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು. ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ "ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ" ಎಂದು ತಿಳಿದಳು. ಯೇಸು ಆಕೆಗೆ "ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ" ಎಂದು ಉತ್ತರಕೊಟ್ಟನು. ಆತನ ತಾಯಿಯು ಸೇವಕರಿಗೆ "ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ" ಎಂದಳು. ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು. ಯೇಸು ಅವರಿಗೆ, "ಆ ಬಾನೆಗಳಲ್ಲಿ ನೀರು ತುಂಬಿರಿ" ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅನಂತರ ಆತನು ಸೇವಕರಿಗೆ, "ಈಗ ಇದನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ" ಎಂದು ಹೇಳಿದಾಗ, ಅವರು ತೆಗೆದುಕೊಂಡು ಹೋಗಿ ಕೊಟ್ಟರು. ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂದಿತೆಂದು ಅವನಿಗೆ ತಿಳಿದಿರಲಿಲ್ಲ, ಆದರೆ ನೀರನ್ನು ತೋಡಿಕೊಂಡು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು, "ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ" ಎಂದನು. ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
2. Cura do cego de nascença
Referência: João 9:1-12
Explicação: Jesus usa lodo para curar um homem que nunca havia enxergado. Este milagre prova que Ele é a Luz do Mundo e tem poder para restaurar o que nasceu com defeito.
ಯೇಸು ಸಬ್ಬತ್ ದಿನದಲ್ಲಿ ಹುಟ್ಟುಕುರುಡನಿಗೆ ಕಣ್ಣುಕೊಟ್ಟಿದ್ದು
ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. ಆತನ ಶಿಷ್ಯರು, "ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?" ಎಂದು ಆತನನ್ನು ಕೇಳಿದರು. ಯೇಸು, "ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು. ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು. ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ" ಎಂದನು. ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು. ಆತನು ಅವನಿಗೆ, "ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ" ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು. ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, "ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?" ಎಂದು ವಿಚಾರಿಸಿದರು. ಕೆಲವರು, "ಹೌದು ಇವನೇ" ಎಂದರು. ಇನ್ನೂ ಕೆಲವರು, "ಅವನಲ್ಲ ಆದರೆ ಅವನ ಹಾಗೆ ಇದ್ದಾನೆ" ಎಂದರು. ಆದರೆ ಅವನಾದರೋ, "ನಾನೇ ಅವನು" ಎಂದು ಹೇಳಿದನು. ಆಗ ಅವರು "ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?" ಎಂದು ಅವನನ್ನು ಕೇಳಿದ್ದಕ್ಕೆ, ಅವನು, "ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು" ಎಂದನು. ಅವರು, "ಆತನು ಎಲ್ಲಿದ್ದಾನೆ?" ಎಂದು ಅವನನ್ನು ಕೇಳಿದ್ದಕ್ಕೆ, ಅವನು "ನನಗೆ ಗೊತ್ತಿಲ್ಲ" ಎಂದನು.
3. Multiplicação dos pães e peixes
Referência: Mateus 14:13-21
Explicação: Com apenas cinco pães e dois peixes, Jesus alimentou mais de 5 mil homens. Este sinal revela Cristo como o Pão da Vida, aquele que supre todas as nossas necessidades.
ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು
ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು. ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, "ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು" ಎಂದು ಹೇಳಿದರು. ಆದರೆ ಯೇಸು, "ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ" ಅಂದನು. ಅದಕ್ಕವರು, "ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ" ಅನ್ನಲಾಗಿ, ಆತನು, "ಅವುಗಳನ್ನು ನನಗೆ ತಂದು ಕೊಡಿರಿ" ಅಂದನು. ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
4. Jesus acalma a tempestade
Referência: Marcos 4:35-41
Explicação: Com uma ordem, o vento e o mar se aquietam. O milagre ensina sobre a paz que excede o entendimento e a autoridade do Messias sobre a criação.
ಯೇಸು ಸಮುದ್ರದ ಮೇಲಣ ಬಿರುಗಾಳಿಯನ್ನು ನಿಲ್ಲಿಸಿದ್ದು
ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, "ಆಚೇದಡಕ್ಕೆ ಹೋಗೋಣ" ಎಂದು ಹೇಳಿದನು. ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು. ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು. ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, "ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ" ಎಂದು ಕೇಳಿದರು. ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ "ಶಾಂತವಾಗಿರು, ಮೊರೆಯಬೇಡ" ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು. ತರುವಾಯ ಆತನು ಅವರನ್ನು, "ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?" ಎಂದು ಕೇಳಲು ಅವರು ಬಹು ಭಯಪಟ್ಟು, "ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ" ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
5. Cura da mulher com fluxo de sangue
Referência: Marcos 5:25-34
Explicação: Uma cura que aconteceu pelo toque da fé. Jesus mostra que está atento ao sofrimento individual e que a fé é o canal para receber o milagre.
ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, "ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು" ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, "ನನ್ನ ಉಡುಪನ್ನು ಮುಟ್ಟಿದವರು ಯಾರು?" ಎಂದು ಕೇಳಲು ಆತನ ಶಿಷ್ಯರು ಆತನಿಗೆ, "ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?" ಎಂದರು. ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,
ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. ಆತನು ಆಕೆಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ" ಎಂದು ಹೇಳಿದನು.
6. Libertação do endemoninhado Gadareno
Referência: Marcos 5:1-20
Explicação: Jesus liberta um homem dominado por uma legião de espíritos. É a prova clara de sua autoridade absoluta sobre o reino das trevas.
ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು
ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು. ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು. ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು. ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು, ಮಹಾಶಬ್ದದಿಂದ ಆರ್ಭಟಿಸಿ, "ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ" ಎಂದು ಹೇಳಿದನು. ಏಕೆಂದರೆ ಯೇಸು, "ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು" ಎಂದು ಆಜ್ಞಾಪಿಸಿದ್ದನು.
ಯೇಸು, "ನಿನ್ನ ಹೆಸರು ಏನೆಂದು" ಅವನನ್ನು ಕೇಳಿದ್ದಕ್ಕೆ ಅವನು, "ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ" ಎಂದು ಹೇಳಿ, ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. ಆ ಅಶುದ್ಧಾತ್ಮಗಳು, "ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು" ಎಂದು ಆತನನ್ನು ಬೇಡಿಕೊಂಡವು. ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು. ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು. ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು. ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, "ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು" ಅಂದನು. ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
7. Ressurreição da filha de Jairo
Referência: Marcos 5:21-43
Explicação: Jesus demonstra que a morte para Ele é como o sono. Ele restaura a vida de uma criança, trazendo esperança para uma família desesperada.
ಸತ್ತಹುಡುಗಿಯ ಮತ್ತು ರಕ್ತಕುಸುಮ ರೋಗಿಯ ಸ್ವಸ್ಥತೆ
ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು. ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು, "ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು" ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು. ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, "ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು" ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು. ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, "ನನ್ನ ಉಡುಪನ್ನು ಮುಟ್ಟಿದವರು ಯಾರು?" ಎಂದು ಕೇಳಲು ಆತನ ಶಿಷ್ಯರು ಆತನಿಗೆ, "ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?" ಎಂದರು. ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,
ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು. ಆತನು ಆಕೆಗೆ, "ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ" ಎಂದು ಹೇಳಿದನು.
ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, "ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?" ಅಂದರು.
ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, "ಅಂಜಬೇಡ, ನಂಬಿಕೆ ಮಾತ್ರ ಇರಲಿ" ಎಂದು ಹೇಳಿದನು. ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ. ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
ಆತನು ಒಳಕ್ಕೆ ಹೋಗಿ, "ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ" ಅನ್ನಲು, ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
ಅವಳ ಕೈಹಿಡಿದು, "ತಲಿಥಾಕೂಮ್" ಅಂದನು. ಈ ಮಾತಿಗೆ "ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ" ಎಂದರ್ಥ. ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು. ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
8. Jesus anda sobre as águas
Referência: Mateus 14:22-33
Explicação: Ao caminhar sobre o Mar da Galileia, Jesus mostra que não está sujeito às leis da física. O episódio também serve para tratar a fé e a dúvida no coração de Pedro.
ಯೇಸು ಸಮುದ್ರದ ಮೇಲೆ ನಡೆದದ್ದು
ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು. ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು. ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು. ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು. ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು "ಭೂತವೆಂದು" ದಿಗಿಲುಬಿದ್ದು ಭಯದಿಂದ ಕೂಗಿದರು. ಕೂಡಲೆ ಯೇಸು ಮಾತನಾಡಿ ಅವರಿಗೆ, "ಧೈರ್ಯವಾಗಿರಿ ನಾನೇ ಭಯಪಡಬೇಡಿರಿ" ಎಂದು ಹೇಳಿದನು. ಅದಕ್ಕೆ ಪೇತ್ರನು, "ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು" ಅನ್ನಲು, ಆತನು, "ಬಾ" ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, "ಕರ್ತನೇ, ನನ್ನನ್ನು ಕಾಪಾಡು" ಎಂದು ಕೂಗಿಕೊಂಡನು. ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, "ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ" ಎಂದು ಹೇಳಿದನು. ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. ಆಗ ದೋಣಿಯಲ್ಲಿದ್ದ ಶಿಷ್ಯರು "ನಿಜವಾಗಿ ನೀನು ದೇವಕುಮಾರನು" ಎಂದು ಹೇಳಿ ಆತನನ್ನು ಆರಾಧಿಸಿದರು.
9. Cura do paralítico
Referência: Marcos 2:1-12
Explicação: Jesus cura o corpo, mas primeiro perdoa os pecados. Este milagre estabelece que sua missão principal é a reconciliação espiritual do homem com Deus.
ಯೇಸು ಒಬ್ಬ ರೋಗಿಯ ಪಾಪವನ್ನು ಕ್ಷಮಿಸಿ ಅವನ ರೋಗವನ್ನು ಸ್ವಸ್ಥಪಡಿಸಿದ್ದಕ್ಕೆ ಶಾಸ್ತ್ರಿಗಳ ಆಕ್ಷೇಪ
ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು. ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, "ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ" ಎಂದು ಹೇಳಿದನು. ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; "ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?" ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, "ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು" ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ" ಅಂದನು. ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, "ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ" ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
10. Ressurreição de Lázaro
Referência: João 11:1-44
Explicação: O milagre mais impactante antes da crucificação. Ao ressuscitar alguém morto há quatro dias, Jesus declara: "Eu sou a ressurreição e a vida".
ಲಾಜರನ ಮರಣ
ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು. ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು. ಹೀಗಿರಲಾಗಿ ಅವನ ಸಹೋದರಿಯರು, "ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ" ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು. ಯೇಸು ಇದನ್ನು ಕೇಳಿ, "ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು" ಎಂದು ಹೇಳಿದನು. ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು. ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು. ಬಳಿಕ ಆತನು ತನ್ನ ಶಿಷ್ಯರಿಗೆ, "ನಾವು ಪುನಃ ಯೂದಾಯಕ್ಕೆ ಹೋಗೋಣ" ಎಂದು ಹೇಳಿದನು. ಆತನ ಶಿಷ್ಯರು ಆತನಿಗೆ, "ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?" ಎಂದರು. ಯೇಸು, "ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ. ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ" ಎಂದು ಉತ್ತರಕೊಟ್ಟನು. ಇದನ್ನು ಹೇಳಿದ ಮೇಲೆ ಆತನು ಅವರಿಗೆ, "ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ" ಎಂದು ಹೇಳಿದನು. ಅದಕ್ಕೆ ಶಿಷ್ಯರು, "ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು" ಎಂದರು. ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು. ಆಗ ಯೇಸು ಸ್ಪಷ್ಟವಾಗಿ ಅವರಿಗೆ, "ಲಾಜರನು ಸತ್ತು ಹೋಗಿದ್ದಾನೆ. ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ" ಎಂದು ಹೇಳಿದನು ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, "ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ" ಎಂದು ಹೇಳಿದನು.
ಮಾರ್ಥ ಮತ್ತು ಮರಿಯಳನ್ನು ಯೇಸು ಸಂತೈಸಿದ್ದು
ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು. ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು. ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು. ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು. ಆಗ ಮಾರ್ಥಳು ಯೇಸುವಿಗೆ, "ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ. ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು" ಎಂದು ಹೇಳಿದಳು. ಯೇಸು ಆಕೆಗೆ, "ನಿನ್ನ ತಮ್ಮನು ಪುನಃ ಎದ್ದು ಬರುವನು" ಎಂದು ಹೇಳಿದನು. ಮಾರ್ಥಳು ಆತನಿಗೆ, "ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು" ಅಂದಳು. ಯೇಸು ಆಕೆಗೆ, "ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು, ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?" ಎಂದು ಕೇಳಿದಕ್ಕೆ, ಆಕೆಯು ಆತನಿಗೆ, "ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ" ಅಂದಳು.
ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, "ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ" ಎಂದಳು. ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು. ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು. ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು. ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, "ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ" ಎಂದಳು. ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು, "ಅವನನ್ನು ಎಲ್ಲಿ ಇಟ್ಟಿದ್ದೀರಿ?" ಎಂದನು. ಅವರು ಆತನಿಗೆ, "ಕರ್ತನೇ, ಬಂದು ನೋಡು" ಎಂದರು. ಯೇಸು ಕಣ್ಣೀರಿಟ್ಟನು. ಅದಕ್ಕೆ ಯೆಹೂದ್ಯರು, "ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ" ಎಂದರು. ಅವರಲ್ಲಿ ಕೆಲವರು, "ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?" ಎಂದರು.
ಯೇಸು ಲಾಜರನನ್ನು ಮರಣದಿಂದ ಎಬ್ಬಿಸಿದ್ದು
ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು. ಯೇಸು, "ಆ ಕಲ್ಲನ್ನು ತೆಗೆದು ಹಾಕಿರಿ" ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, "ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು" ಎಂದಳು. ಯೇಸು ಆಕೆಗೆ, "ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?" ಎಂದು ಉತ್ತರ ಕೊಟ್ಟನು ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, "ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ" ಎಂದು ಹೇಳಿದನು. ಆತನು ಹೀಗೆ ಹೇಳಿದ ಮೇಲೆ, "ಲಾಜರನೇ, ಹೊರಗೆ ಬಾ!" ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, "ಅವನನ್ನು ಬಿಡಿಸಿರಿ, ಅವನು ಹೋಗಲಿ" ಎಂದು ಹೇಳಿದನು.
Conclusão
Os milagres de Jesus revelam sua autoridade sobre a natureza, as enfermidades, o mundo espiritual e até a morte. Eles não são apenas demonstrações de poder, mas sinais que apontam para sua identidade e missão.
Ao estudar esses milagres, é possível compreender melhor o papel de Jesus e a mensagem central do Evangelho.
Se este conteúdo ajudou você a entender os milagres de Jesus na Bíblia, compartilhe este artigo para que mais pessoas também conheçam esses ensinamentos.