A fé vem pelo ouvir
A fé vem pelo ouvir, e o ouvir pela Palavra de Cristo. Quando a Palavra é proclamada, a fé nasce nos corações. Ouvir a Deus é o primeiro passo para crer e seguir.
A fé vem pelo ouvir
A fé vem pelo ouvir, e o ouvir pela Palavra de Cristo. Quem ouve a Palavra crê e obtém a salvação eterna.
ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ. ಏಕೆಂದರೆ, "ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು."
ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ? ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, "ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!" ಎಂದು ಬರೆಯಲಾಗಿದೆ.
ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, "ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?" ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ. ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?
ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ. ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.
"ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.
ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು. ‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.
Ouvir e obedecer
Felizes os que ouvem a Palavra de Deus e a praticam. Quem tem ouvidos ouça o que o Espírito diz.
ಅದಕ್ಕೆ ಯೇಸು, "ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು," ಎಂದರು.
ಕಿವಿಯುಳ್ಳವರು ಕೇಳಲಿ."
ಯೇಸು ಅವರಿಗೆ, "ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ,
" ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ;
ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.
ಈ ಜನರ ಹೃದಯವು ಕಠೋರವಾಗಿದೆ;
ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ,
ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ.
ಇಲ್ಲವಾದರೆ ತಾವು ಕಣ್ಣಿನಿಂದ ಕಂಡು,
ಕಿವಿಯಿಂದ ಕೇಳಿ.
ತಮ್ಮ ಹೃದಯದಿಂದ ತಿಳಿದು,
ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’
ಎಂಬುದೇ. ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.
ಯೇಸು ಜನಸಮೂಹವನ್ನು ಕರೆದು ಅವರಿಗೆ, "ಕೇಳಿ ತಿಳಿದುಕೊಳ್ಳಿರಿ.
ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ,
ಆಲಿಸಿದರೆ ಬದುಕಿ ಬಾಳುವಿರಿ.
ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು
ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.
ಅದಕ್ಕೆ ಅವರು, "ನೀನು ಈ ಜನರ ಬಳಿಗೆ ಹೋಗಿ:
" ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ;
ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’
ತಮ್ಮ ಕಣ್ಣುಗಳಿಂದ ನೋಡದಂತೆಯೂ,
ತಮ್ಮ ಕಿವಿಗಳಿಂದ ಕೇಳದಂತೆಯೂ,
ತಮ್ಮ ಹೃದಯದಿಂದ ಗ್ರಹಿಸಿ
ತಿರುಗಿಕೊಂಡು ಸ್ವಸ್ಥವಾಗದಂತೆಯೂ
ಈ ಜನರ ಹೃದಯವನ್ನು ಕಠಿಣಗೊಳಿಸಿ,
ಅವರ ಕಿವಿಯನ್ನು ಮಂದಗೊಳಿಸಿ,
ಅವರ ಕಣ್ಣುಗಳನ್ನು ಮೊಬ್ಬಾಗಿಸು,"
ಎಂದು ನನಗೆ ಹೇಳಿದರು.
ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.