A última palavra vem do Senhor
A última palavra pertence ao Senhor. Os planos do homem estão sujeitos à soberania de Deus. Ele rege toda a história e nenhum de seus propósitos pode ser frustrado.
ಹೃದಯದ ಸಂಕಲ್ಪವು ಮನುಷ್ಯನ ವಶವು,
ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.
ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ,
ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ.
ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ.
ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ?
ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
ಯೆಹೋವನು ಮೋಶೆಗೆ, "ನನ್ನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಈಗ ನೀನು ನೋಡುವಿ" ಎಂದು ಹೇಳಿದನು.
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ,
ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
"ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?
"ನೀನು ಸಕಲ ಕಾರ್ಯಗಳನ್ನು ನಡೆಸಬಲ್ಲೆಯೆಂತಲೂ,
ಯಾವ ಸಂಕಲ್ಪವೂ ನಿನಗೆ ಅಸಾಧ್ಯವಲ್ಲವೆಂತಲೂ ತಿಳಿದುಕೊಂಡೇ ಇದ್ದೇನೆ.
ಯೆಹೋವನು ಭೂಮಿಯಲ್ಲಿಯೂ, ಆಕಾಶದಲ್ಲಿಯೂ,
ಸಮುದ್ರಗಳಲ್ಲಿಯೂ, ಬೇರೆ ಎಲ್ಲಾ ಜಲರಾಶಿಗಳಲ್ಲಿಯೂ
ತನಗೆ ಬೇಕಾದದ್ದನ್ನು ಮಾಡುತ್ತಾನೆ.
ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
ಕರ್ತನಾದ ಯೆಹೋವನು ಇಂತೆನ್ನುತ್ತಾನೆ. "ಇಗೋ! ಇದು ಬಂತು, ಇದು ಸಂಭವಿಸಿತು; ನಾನು ಮುಂತಿಳಿಸಿದ ದಿನವು ಇದೇ.
ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ. ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು "ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು" ಎಂದು ಹೇಳಬೇಕು.
Este artigo te tocou? Faça uma oração!
+581 estão orando agora.
Junte-se à corrente de oração.