Aceitar Jesus
Aceitar Jesus é a decisão mais importante da vida. Quem o recebe como Senhor e Salvador recebe vida eterna, perdão completo e a presença permanente do Espírito Santo.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಯೇಸು ಅವನಿಗೆ, "ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.
ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ" ಎಂಬುದೇ.
ಪೇತ್ರನು ಅವರಿಗೆ, "ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ" ಎಂದು ಹೇಳಿದನು.
ಅವರು; "ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು" ಎಂದು ಹೇಳಿ,
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.