Aceitar Jesus
Aceitar Jesus é a decisão mais importante da vida. Quem o recebe como Senhor e Salvador recebe vida eterna, perdão completo e a presença permanente do Espírito Santo.
ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಯೇಸು ಅವನಿಗೆ, "ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.
ನೀನು, "ಯೇಸುವೇ ಕರ್ತ," ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.
ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ
ರಕ್ಷಣೆ ಆಗುವುದು.’
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ," ಎಂದನು.
"ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು," ಎಂದರು.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.