Adoração
A adoração é a resposta do coração humano à majestade de Deus. Deus é Espírito e importa que os que o adoram o adorem em espírito e em verdade — com todo o ser.
Adorar em espírito
Deus é Espírito e importa que os adoradores o adorem em espírito e em verdade. A adoração verdadeira brota do coração.
ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು," ಎಂದರು.
ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ. ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು," ಎಂದರು.
ಯೇಸು ಆಕೆಗೆ, "ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ. ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ. ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.
ಆಗ ಅವನು, "ಸ್ವಾಮೀ, ನಾನು ನಂಬುತ್ತೇನೆ," ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು.
ಯೇಸು ಅವನಿಗೆ, "ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ," ಎಂದರು.
ಯೇಸು ಅವನಿಗೆ ಉತ್ತರವಾಗಿ, " ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ," ಎಂದರು.
ಸಜೀವ ಯಜ್ಞಗಳು
ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
ಸಜೀವ ಯಜ್ಞಗಳು
ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು. ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ.
ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.
ಪವಿತ್ರ ವೇದದಲ್ಲಿ ಹೀಗೆ ಬರೆದಿದೆ:
" ‘ನಾನು ಜೀವಿಸುವುದರಿಂದ,
ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು.
ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’
ಎಂದು ಕರ್ತನು ಹೇಳುತ್ತಾರೆ."
Louvor e reverência
Vinde, adoremos e prostremo-nos. Louvai ao Senhor! Todo ser que respira louve o nome glorioso do Senhor.
ಬನ್ನಿರಿ, ಆರಾಧಿಸೋಣ;
ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.
ಬನ್ನಿರಿ, ಆರಾಧಿಸೋಣ;
ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.
ಯೆಹೋವ ದೇವರಿಗೆ ಸ್ತೋತ್ರ!
ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ;
ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.
ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ;
ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.
ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ,
ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.
ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ;
ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.
ತಾಳಗಳಿಂದ ದೇವರನ್ನು ಸ್ತುತಿಸಿರಿ;
ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.
ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ.
ಯೆಹೋವ ದೇವರಿಗೆ ಸ್ತೋತ್ರ!
ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ.
ಯೆಹೋವ ದೇವರಿಗೆ ಸ್ತೋತ್ರ!
ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ,
ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ;
ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.
ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ;
ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.
ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹಧ್ವನಿ ಮಾಡಿರಿ.
ದೇವರ ಹೆಸರಿನ ಮಹಿಮೆಯನ್ನು ಕೊಂಡಾಡಿರಿ.
ದೇವರ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
ನೀವು ದೇವರಿಗೆ, "ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ.
ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು
ನಿಮ್ಮ ಶಕ್ತಿ ದೊಡ್ಡದಾಗಿದೆ.
ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು.
ನಿಮ್ಮನ್ನು ಕೀರ್ತಿಸುತ್ತಾ
ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು," ಎಂದು ಹೇಳಿರಿ.
ನನ್ನ ದೇವರಿಗೆ ಮೊರೆಯಿಟ್ಟೆನು,
ನನ್ನ ನಾಲಿಗೆಯಲ್ಲಿ ದೇವರ ಸ್ತೋತ್ರವಿತ್ತು.
ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು
ನಿಮ್ಮ ಮುಂದೆ ಅಡ್ಡಬಿದ್ದು,
ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.
ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ.
ನೀವೊಬ್ಬರೇ ದೇವರು.
ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು;
ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ;
ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
ದೇವರೇ, ನನ್ನ ದೇವರು ನೀವೇ,
ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ.
ನಾನು ನಿಮಗಾಗಿ ದಾಹಗೊಂಡಿದ್ದೇನೆ.
ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ
ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ.
ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.
ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು.
ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.
ನಾನು ಜೀವಿಸುವ ಕಾಲವೆಲ್ಲಾ ನಿಮ್ಮನ್ನೇ ಸ್ತುತಿಸುವೆನು.
ನಿಮ್ಮ ಹೆಸರಿನಲ್ಲಿ ನಾನು ನನ್ನ ಕೈ ಮುಗಿಯುವೆನು.
Declarações de adoração
Tu és digno, Senhor, de receber glória e honra! Ao Senhor pertence a grandeza, o poder, a glória e a majestade.
"ನಮ್ಮ ಕರ್ತ ಆಗಿರುವ ದೇವರೇ,
ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ.
ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ.
ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು,
ನಿಮ್ಮ ಚಿತ್ತದಿಂದಲೇ ಇದ್ದವು,"
ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.
ಅವನು, "ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!" ಎಂದು ಮಹಾಧ್ವನಿಯಿಂದ ಹೇಳಿದನು.
ಕರ್ತನೇ, ನಿನಗೆ ಭಯಪಡದವರೂ
ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು?
ಏಕೆಂದರೆ ನೀನೊಬ್ಬನೇ ಪರಿಶುದ್ಧನು.
ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ
ಎಲ್ಲಾ ರಾಷ್ಟ್ರಗಳವರು ಬಂದು,
ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,"
ಎಂದು ಹೇಳಿದರು.
ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಅವನು ನನಗೆ, "ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!" ಎಂದು ಹೇಳಿದನು.
ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ,
ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ.
ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ.
ಯೆಹೋವ ದೇವರೇ, ರಾಜ್ಯವು ನಿಮ್ಮದು.
ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.
ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.
ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.
ನಮ್ಮ ರಕ್ಷಣೆಯ ದೇವರೇ,
"ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ,
ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ,
ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ."
ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ
ಯುಗಯುಗಕ್ಕೂ ಸ್ತುತಿಯುಂಟಾಗಲಿ,
ಜನರೆಲ್ಲರೂ, "ಆಮೆನ್," ಎಂದು ಹೇಳಲಿ. ನೀವು, "ಯೆಹೋವ ದೇವರನ್ನು ಸ್ತುತಿಸಿರಿ," ಎಂದು ಹೇಳಿದರು.
ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.
ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.
ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ,
ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ
ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.
ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ
ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,
ತಂದೆಯಾದ ದೇವರ ಮಹಿಮೆಗಾಗಿ
ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.
Sacrifício de louvor
Por meio de Jesus ofereçamos sempre sacrifício de louvor. Cantai ao Senhor, celebrai em salmos — enchei-vos do Espírito.
ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ. ಏಕೆಂದರೆ ನಮ್ಮ, "ದೇವರು ದಹಿಸುವ ಅಗ್ನಿಯಾಗಿದ್ದಾರೆ."
ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.
ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.
ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.
ಸಂತೈಸುವ ದೇವರು
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ. ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.
Adoração como vida
Exaltai ao Senhor, prostrai-vos ante o escabelo dos seus pés. A adoração genuína transforma o adorador e agrada o Criador.
ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ.
ಅವರ ಪಾದಪೀಠದಲ್ಲಿ ಆರಾಧಿಸಿರಿ.
ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.
ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ.
ನಾನು ದಿನವೆಲ್ಲಾ ನಿಮ್ಮ ವೈಭವವನ್ನೇ ಸಾರುತ್ತಿರುವೆ.
ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ.
ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ.
ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.
ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ,
ವಿಧವೆಯರಿಗೆ ರಕ್ಷಕರಾಗಿದ್ದಾರೆ.
ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು.
ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.
ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು;
ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.
ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ;
ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ;
ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.
ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ;
ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.
ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ?
ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ?
ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ.
ಹೌದು, ನಾನು
ದೇವರನ್ನೇ ಕೊಂಡಾಡುತ್ತಿರುವೆನು.
ನಾನು ಯೆಹೋವ ದೇವರಿಗೆ, "ನೀವೇ ನನ್ನ ಕರ್ತ;
ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು," ಎಂದು ಹೇಳಿದೆನು.
ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ,
ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.
ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು;
ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು.
Falsa adoração
Não terás outros deuses diante de mim. Não adorarás ídolos. A adoração exclusiva ao Senhor é mandamento inegociável.
ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.
ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು.
ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು. ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.
"ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ;
ಅವರು ನನ್ನ ರಕ್ಷಣೆಯಾದರು;
ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು;
ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.
ಯೆಹೋವ ದೇವರೇ,
ನಿಮ್ಮ ಹಾಗೆ ಯಾರಿದ್ದಾರೆ?
ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ,
ಮಹಿಮೆಯಲ್ಲಿ ಅತಿಶಯರೂ,
ಅದ್ಭುತಗಳನ್ನು ಮಾಡುವವರೂ ಆದ
ನಿಮ್ಮ ಹಾಗೆ ಯಾರಿದ್ದಾರೆ?
ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.
ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.
ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.
ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು.
ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.
ದೇವರಿಗೆ ಅಲ್ಲ, ದೆವ್ವಗಳಿಗೆ,
ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ,
ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ,
ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.
ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ,
ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.
ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.
ಕರ್ತರು ಹೇಳುವುದೇನೆಂದರೆ:
"ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ,
ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ,
ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ
ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ಯೆಹೋವ ದೇವರಿಗೆ ಸ್ತುತಿ
ಯೆಹೋವ ದೇವರೇ, ನೀವೇ ನನ್ನ ದೇವರು.
ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ,
ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ,
ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ,
ನಿಮ್ಮ ನಾಮವನ್ನು ಕೊಂಡಾಡುವೆನು.
ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ:
" ‘ಇಸ್ರಾಯೇಲಿನ ಮನೆತನದವರೇ,
ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.
ಮೊಲೋಖನ ಗುಡಾರವನ್ನೂ
ರೊಂಫಾ ದೇವತೆಯ ನಕ್ಷತ್ರವನ್ನೂ
ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ.
ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’
ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.
ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ. ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.
ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ! ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.
Exemplos de adoração
Jó adorou em meio ao sofrimento. Esdras adorou na restauração. Paulo e Silas adoraram na prisão — e Deus respondeu.
ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,
ಹೀಗೆ ಹೇಳಿದನು: "ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು,
ಬೆತ್ತಲೆಯಾಗಿ ಗತಿಸಿ ಹೋಗುವೆನು.
ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು;
ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ."
ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು:
"ಯೆಹೋವ ದೇವರು ಒಳ್ಳೆಯವರು!
ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!"
ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.
ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.
"ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.
"ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ.
ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ.
ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.
ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: "ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ," ಎಂದರು.
ಅನಂತರ ಅವರು, "ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.
ಅಂಜೂರದ ಗಿಡವು ಚಿಗುರದಿದ್ದರೂ,
ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ,
ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ,
ಹೊಲಗಳು ಆಹಾರ ಕೊಡದಿದ್ದರೂ,
ಕುರಿಹಟ್ಟಿಗಳು ಬರಿದಾಗಿ ಹೋದರೂ,
ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು.
ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.
ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.