O adultério
O adultério é pecado grave que destrói alianças, famílias e vidas. A Bíblia condena firmemente a infidelidade conjugal e chama à pureza, fidelidade e santidade no casamento.
A lei de Deus
Não adulterarás. Quem comete adultério destrói a própria alma. A Palavra de Deus é clara e direta sobre este pecado.
"ವ್ಯಭಿಚಾರಮಾಡಬಾರದು.
"‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.
ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.
ವ್ಯಭಿಚಾರಿಯೋ ಕೇವಲ ಬುದ್ಧಿಹೀನನು,
ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
ವ್ಯಭಿಚಾರಿಯೋ ಕೇವಲ ಬುದ್ಧಿಹೀನನು,
ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
ಅವನಿಗೆ ಗಾಯವೂ, ಅವಮಾನವೂ ಆಗುವವು,
ಅವನ ಕೆಟ್ಟ ಹೆಸರು ಎಂದಿಗೂ ಅಳಿಸಲ್ಪಡದು.
ಏಕೆಂದರೆ ಮತ್ಸರವು ಪತಿಗೆ ಕ್ರೋಧವನ್ನು ಉಂಟುಮಾಡುತ್ತದೆ,
ಅವನು ಮುಯ್ಯಿತೀರಿಸತಕ್ಕ ದಿನದಲ್ಲಿ ವ್ಯಭಿಚಾರಿಯನ್ನು ಉಳಿಸನು.
ಅವನು ಯಾವ ಈಡನ್ನೂ ಮುಟ್ಟನು; ಎಷ್ಟು ಲಂಚಕೊಟ್ಟರೂ ಒಪ್ಪನು.
ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ
ಬಟ್ಟೆ ಸುಡುವುದಿಲ್ಲವೋ?
ಧಗಧಗಿಸುವ ಕೆಂಡದ ಮೇಲೆ ನಡೆದರೆ
ಕಾಲು ಬೇಯುವುದಿಲ್ಲವೋ?
ನೆರೆಯವನ ಹೆಂಡತಿಯ ಹತ್ತಿರ ಹೋಗುವವನಿಗೆ ಹೀಗೆಯೇ ಆಗುವುದು,
ಯಾರು ಅವಳನ್ನು ಮುಟ್ಟುವನೋ ಅವನು ದಂಡನೆಯನ್ನು ಹೊಂದದೇ ಇರನು.
Jesus ensina
Quem olhar para uma mulher com intenção impura já adulterou no coração. Jesus elevou o padrão da pureza.
"‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.
ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.
ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
ಅದಕ್ಕೆ ಆತನು, "ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ; ಮತ್ತು ಹೆಂಡತಿಯು ತನ್ನ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ಮದುವೆಮಾಡಿಕೊಂಡರೆ ಅವಳು ವ್ಯಭಿಚಾರ ಮಾಡಿದವಳಾಗಿದ್ದಾಳೆ" ಎಂದು ಹೇಳಿದನು.
"ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
ಯೇಸುವಿಗೆ, "ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು. ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?" ಎಂದು ಆತನನ್ನು ಕೇಳಿದರು. ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, "ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ" ಎಂದು ಹೇಳಿದನು ತಿರುಗಿ ಆತನು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು. ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು. ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, "ಸ್ತ್ರೀಯೇ, ಅವರು ಎಲ್ಲಿಗೆ ಹೋದರು? ನಿನ್ನನ್ನು ಖಂಡಿಸುವುದಕ್ಕೆ ಯಾರೂ ಉಳಿಯಲಿಲ್ಲವೋ?" ಎಂದನು. ಅದಕ್ಕೆ ಆಕೆಯು "ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ" ಎಂದಳು. ಯೇಸು ಆಕೆಗೆ "ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ" ಎಂದು ಹೇಳಿದನು.
Armadilhas e consequências
Os lábios da mulher estranha destilam mel, mas o seu fim é amargo. Fuja da imoralidade — o adultério escraviza.
ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು,
ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ಅವಳು ಕಡೆಯಲ್ಲಿ ವಿಷದಂತೆ ಕಹಿಯೂ,
ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು,
ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.
ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು,
ಅದು ಅವಳಿಗೆ ತಿಳಿದೇ ಇಲ್ಲ.
ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು,
ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ಅವಳು ಕಡೆಯಲ್ಲಿ ವಿಷದಂತೆ ಕಹಿಯೂ,
ಇಬ್ಬಾಯಿಕತ್ತಿಯಂತೆ ತೀಕ್ಷ್ಣವೂ ಆಗುವಳು.
ಅವಳು ಮರಣದ ಕಡೆಗೆ ನಡೆಯುತ್ತಾ ಇಳಿದು ಹೋಗುವಳು,
ಅವಳ ಹೆಜ್ಜೆಗಳು ಪಾತಾಳದ ದಾರಿಯನ್ನು ಹಿಡಿಯುವವು.
ಅವಳ ನಡತೆಯು ಚಂಚಲವಾಗಿರುವುದರಿಂದ ಅವಳು ಜೀವದ ಮಾರ್ಗವನ್ನು ವಿವೇಚಿಸಲಾರಳು,
ಅದು ಅವಳಿಗೆ ತಿಳಿದೇ ಇಲ್ಲ.
ಹೀಗಿರಲು ಮಗನೇ, ನನ್ನ ಕಡೆಗೆ ಕಿವಿಗೊಡು,
ನನ್ನ ಮಾತುಗಳಿಂದ ದೂರವಾಗಿರಬೇಡ.
ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ
ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು,
ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
ನಿನ್ನ ಮಾರ್ಗವು ಅವಳಿಗೆ ದೂರವಾಗಿರಲಿ
ಅವಳ ಮನೆಬಾಗಿಲ ಹತ್ತಿರ ಹೋದೆಯಾ, ಎಚ್ಚರಿಕೆ!
ಎಚ್ಚರವಹಿಸಿಕೋ, ನಿನ್ನ ಪುರುಷತ್ವವು ಪರಾಧೀನವಾಗುವುದು,
ನಿನ್ನ ಆಯುಷ್ಯವು ಕ್ರೂರರ ವಶವಾಗುವುದು.
ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳುವರು,
ನೀನು ಅನ್ಯನ ಮನೆಯಲ್ಲಿ ದುಡಿಯುವಿ.
ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
"ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ,
ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
ನನ್ನ ಬೋಧಕರ ಮಾತನ್ನು ಕೇಳದೆ ಹೋದೆನಲ್ಲಾ,
ನನ್ನ ಉಪದೇಶಕರ ಕಡೆಗೆ ಕಿವಿಗೊಡಲಿಲ್ಲವಲ್ಲಾ!
ನಾನು ದೇವಜನರ ಸಭೆಯ ನಡುವೆ
ಎಲ್ಲಾ ಕೇಡಿಗೂ ಸಿಕ್ಕಿಕೊಳ್ಳುವ ಹಾಗೆ ಆದೆನು" ಎಂದು ಅಂದುಕೊಳ್ಳುವಿ.
ಆಕೆ ಮನೋಹರವಾದ ಜಿಂಕೆಯಂತೆಯೂ, ಅಂದವಾದ ದುಪ್ಪಿಯ ಹಾಗೂ ಇರುವಳಲ್ಲಾ,
ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಪ್ರೀತಿಯಲ್ಲೇ ನಿರಂತರವಾಗಿ ಲೀನವಾಗಿರು.
ಮಗನೇ, ಏಕೆ ಪರಸ್ತ್ರೀಯಲ್ಲಿ ಭ್ರಮೆಗೊಳ್ಳುವಿ,
ಅನ್ಯಳ ಎದೆಯನ್ನು ತಬ್ಬಿಕೊಳ್ಳುವುದೇಕೆ?
ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ,
ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.
ಅವಳ ಬಳಿಗೆ ಹೋಗುವವರು ಯಾರೂ ಹಿಂದಿರುಗುವುದಿಲ್ಲ,
ಅವರಿಗೆ ಜೀವದ ಮಾರ್ಗವು ದೊರೆಯುವುದೇ ಇಲ್ಲ.
ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ,
ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. "ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ", ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
ಆತ್ಮನ ಫಲವು ಮತ್ತು ದೇಹದ ದುಷ್ಫಲಗಳು
ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ. ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ, ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು. ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ. ಇಗೋ, ಅವಳು ಹಾಸಿಗೆಯಲ್ಲಿ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರಮಾಡುವವರು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಂಡು ಬಿಡದೆ ಹೋದರೆ ಅವರನ್ನು ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.