Agradecimento a Deus
Agradecer a Deus é louvor, adoração e reconhecimento da sua soberania. Dai graças ao Senhor porque Ele é bom — a sua misericórdia dura para sempre!
ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
ಯೆಹೋವನ ಕ್ಷಮಾಯಾಚನೆ
ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ.
ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ;
ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,
ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.
ನಾನು ಸಂಕೀರ್ತಿಸುತ್ತಾ ದೇವರ ನಾಮವನ್ನು ಕೊಂಡಾಡುವೆನು;
ಕೃತಜ್ಞತಾಸ್ತುತಿಯಿಂದ ಘನಪಡಿಸುವೆನು.
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
ಕೃತಜ್ಞತಾಸ್ತುತಿಯೂ ಪ್ರಾರ್ಥನೆಗಳೂ
ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.
ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಪೌಲನು ಥೆಸಲೋನಿಕದವರ ನಂಬಿಕೆಗಾಗಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ
ನಾವು ನಂಬಿಕೆಯ ಫಲವಾದ ನಿಮ್ಮ ಕಾರ್ಯವನ್ನೂ, ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಿನ ನೀವಿಟ್ಟಿರುವ ಅಚಲವಾದ ನಿರೀಕ್ಷೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕ ಮಾಡಿಕೊಂಡು, ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
ಪೌಲನು ಸಭೆಯವರ ವಿಷಯದಲ್ಲಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ
ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.
ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು. ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ. ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ. ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು. ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು. ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.