Agradecimento a Deus
Agradecer a Deus é louvor, adoração e reconhecimento da sua soberania. Dai graças ao Senhor porque Ele é bom — a sua misericórdia dura para sempre!
ಧನ್ಯವಾದದೊಡನೆ ಅವರ ಸನ್ನಿಧಿಯಲ್ಲಿ ಮುಂದೆ ಬಂದು
ಕೀರ್ತನೆಗಳಿಂದ ಅವರಿಗೆ ಜಯಧ್ವನಿ ಮಾಡೋಣ.
ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ,
ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ;
ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.
ಯೆಹೋವ ದೇವರನ್ನು ಸ್ತುತಿಸಿರಿ.
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು.
ಅವರ ಪ್ರೀತಿ ಶಾಶ್ವತವಾಗಿರುವುದು.
ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು;
ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು.
ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ,
ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ.
ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು.
ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು.
ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ;
ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು;
ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು;
ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.
ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ,
ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
ಕೃತಜ್ಞತಾಸ್ತುತಿ ಮತ್ತು ಪ್ರಾರ್ಥನೆ
ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ಪೌಲನ ಕೃತಜ್ಞತಾಸ್ತುತಿ
ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.
ಉಪಕಾರ ಸ್ಮರಣೆ
ಕ್ರಿಸ್ತ ಯೇಸುವಿನಲ್ಲಿ ನಿಮಗೆ ಕೊಟ್ಟಿರುವ ದೇವರ ಕೃಪೆಯ ಕಾರಣಕ್ಕಾಗಿ ನಾನು ಯಾವಾಗಲೂ ನಿಮಗೋಸ್ಕರ ಅವರಿಗೆ ಕೃತಜ್ಞತೆ ಹೇಳುವವನಾಗಿದ್ದೇನೆ.
ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.
ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು. ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.
ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ. ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.
ವಿಶ್ವಾಸಿಗಳ ಕುಟುಂಬಕ್ಕೆ ಬುದ್ಧಿವಾದಗಳು
ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.
ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು. ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.
Este artigo te tocou? Faça uma oração!
+581 estão orando agora.
Junte-se à corrente de oração.