Agradecimento
O agradecimento é a linguagem natural do cristão. Em tudo dai graças! A gratidão a Deus transforma a perspectiva, fortalece a fé e produz alegria em todos os tempos.
Dar graças sempre
Em tudo dai graças, porque esta é a vontade de Deus em Cristo Jesus para convosco. A gratidão é atitude fundamental.
ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಪ್ರಾರ್ಥಿಸಲು ಉತ್ತೇಜನ
ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ, ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.
Louvor e gratidão
Entrai pelas portas com ação de graças. Rendei graças ao Senhor porque Ele é bom e a sua bondade dura para sempre.
ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ,
ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ;
ಆತನ ಉಪಕಾರಗಳನ್ನು ಸ್ಮರಿಸಿರಿ;
ಆತನ ನಾಮವನ್ನು ಕೊಂಡಾಡಿರಿ.
ಯೆಹೋವನ ಸ್ತುತಿ
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ,
ಆತನು ಒಳ್ಳೆಯವನು. ಆತನ ಪ್ರೀತಿಯು ಶಾಶ್ವತವಾದದ್ದು.
ವಿಮುಕ್ತರ ಕೊಂಡಾಟ
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾಗಿರುವುದು.
ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ;
ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.
ಯೆಹೋವನು ಮಹಾದೇವರೂ,
ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.
ದೇವರ ನೀತಿಸಾಧನೆಗಳನ್ನು ಹೊಗಳುವುದು
ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು;
ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು."
ನೀನು ನನ್ನ ದೇವರು; ನಿನ್ನನ್ನು ಕೊಂಡಾಡುತ್ತೇನೆ;
ನನ್ನ ದೇವರೇ, ನಿನ್ನನ್ನು ಘನಪಡಿಸುತ್ತೇನೆ.
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾದದ್ದು.
ಆದುದರಿಂದ ನಮ್ಮ ದೇವರೇ ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ, ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.
Expressões de gratidão
Graças a Deus pelo seu dom inefável! A gratidão se expressa em oração, louvor e generosidade para com os outros.
ವರ್ಣಿಸಲಸಾಧ್ಯವಾದ ದಾನಗಳ ನಿಮಿತ್ತ ದೇವರಿಗೆ ಸ್ತೋತ್ರವಾಗಲಿ.
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.
ಪೌಲನು ಸಭೆಯವರ ವಿಷಯದಲ್ಲಿ ದೇವರಿಗೆ ಮಾಡಿದ ಕೃತಜ್ಞತಾಸ್ತುತಿ
ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.
ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು,
ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು.
ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು."
ದೇವರಿಗೆ ಕೃತಜ್ಞತಾಸ್ತುತಿ
ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.
ತಿಮೊಥೆಯನು ಸುವಾರ್ತಾಸೇವೆಯಲ್ಲಿ ನಂಬಿಗಸ್ತನಾಗಿರಬೇಕೆಂದು ಬೋಧನೆ
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.
ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.
ಆತನು ಅವರನ್ನು ನೋಡಿ, "ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ" ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು. ಯೇಸು ಇದನ್ನು ನೋಡಿ, "ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?" ಎಂದು ಹೇಳಿ, ಅವನಿಗೆ, "ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ" ಎಂದು ಹೇಳಿದನು.
ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು, "ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು" ಎಂದು ಕೂಗಿ ಹೇಳಿದರು. ಆತನು ಅವರನ್ನು ನೋಡಿ, "ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ" ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು. ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು, ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು. ಯೇಸು ಇದನ್ನು ನೋಡಿ, "ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ? ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?" ಎಂದು ಹೇಳಿ, ಅವನಿಗೆ, "ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ" ಎಂದು ಹೇಳಿದನು.
ಕೃತಜ್ಞತಾಸ್ತುತಿಯೂ ಪ್ರಾರ್ಥನೆಗಳೂ
ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.