Agradecimento
O agradecimento é a linguagem natural do cristão. Em tudo dai graças! A gratidão a Deus transforma a perspectiva, fortalece a fé e produz alegria em todos os tempos.
Dar graças sempre
Em tudo dai graças, porque esta é a vontade de Deus em Cristo Jesus para convosco. A gratidão é atitude fundamental.
ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ. ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ. ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.
ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ. ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.
ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.
Louvor e gratidão
Entrai pelas portas com ação de graças. Rendei graças ao Senhor porque Ele é bom e a sua bondade dura para sempre.
ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ,
ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ;
ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.
ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು;
ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು;
ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.
ಧನ್ಯವಾದದೊಡನೆ ಅವರ ಸನ್ನಿಧಿಯಲ್ಲಿ ಮುಂದೆ ಬಂದು
ಕೀರ್ತನೆಗಳಿಂದ ಅವರಿಗೆ ಜಯಧ್ವನಿ ಮಾಡೋಣ.
ಯೆಹೋವ ದೇವರು ಮಹಾ ದೇವರು,
ಎಲ್ಲಾ ದೇವರುಗಳ ಮೇಲೆ ಮಹಾರಾಜರೂ ಆಗಿದ್ದಾರೆ.
ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು.
ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು.
ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ
ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.
ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು.
ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು."
ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು;
ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು.
ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು;
ಅವರ ಪ್ರೀತಿ ಶಾಶ್ವತವಾಗಿರುವುದು.
ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ,
ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.
Expressões de gratidão
Graças a Deus pelo seu dom inefável! A gratidão se expressa em oração, louvor e generosidade para com os outros.
ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತೋತ್ರವಾಗಲಿ!
ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.
ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.
ಕ್ರಿಸ್ತ ಯೇಸುವಿನಲ್ಲಿ ನಿಮಗೆ ಕೊಟ್ಟಿರುವ ದೇವರ ಕೃಪೆಯ ಕಾರಣಕ್ಕಾಗಿ ನಾನು ಯಾವಾಗಲೂ ನಿಮಗೋಸ್ಕರ ಅವರಿಗೆ ಕೃತಜ್ಞತೆ ಹೇಳುವವನಾಗಿದ್ದೇನೆ.
ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.
ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ.
ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.
" ‘ "ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ,
ನಿಮ್ಮನ್ನು ಕಾಪಾಡಲಿ.
ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ,
ನಿಮಗೆ ಕೃಪೆ ತೋರಿಸಲಿ.
ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ,
ನಿಮಗೆ ಸಮಾಧಾನ ಅನುಗ್ರಹಿಸಲಿ." ’
ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು.
ನಾನು ಮಾಡಿದ ಹರಕೆಯನ್ನು ತೀರಿಸುವೆನು.
ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು."
ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.
ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ.
ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.
ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ.
ಯೇಸು ಅವರನ್ನು ನೋಡಿ, "ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ," ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.
ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು, ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.
ಯೇಸು ಅವನಿಗೆ, "ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ? ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?" ಎಂದು ಹೇಳಿ ಅವನಿಗೆ, "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು.
ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು, "ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!" ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.
ಯೇಸು ಅವರನ್ನು ನೋಡಿ, "ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ," ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.
ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು, ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.
ಯೇಸು ಅವನಿಗೆ, "ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ? ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?" ಎಂದು ಹೇಳಿ ಅವನಿಗೆ, "ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ," ಎಂದರು.
ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.