Ajuda ao próximo
Ajudar o próximo é mandamento de Deus e expressão prática da fé. A Bíblia ensina que a fé sem obras é morta — e que servir ao menor dos irmãos é servir a Cristo.
ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ; ಬಟ್ಟೆಯಿಲ್ಲದವನಾಗಿದ್ದೆನು, ನನಗೆ ಉಡುವುದಕ್ಕೆ ಕೊಟ್ಟಿರಿ; ಅಸ್ವಸ್ಥನಾಗಿದ್ದಾಗ, ನನ್ನನ್ನು ಆರೈಕೆ ಮಾಡಿದಿರಿ; ಸೆರೆಮನೆಯಲ್ಲಿದ್ದೆನು, ನನ್ನನ್ನು ನೋಡುವುದಕ್ಕೆ ಬಂದಿರಿ’ ಎಂದು ಹೇಳುವನು. ಅದಕ್ಕೆ ಉತ್ತರವಾಗಿ ನೀತಿವಂತರು, ‘ಕರ್ತನೇ, ಯಾವಾಗ ನೀನು ಹಸಿದಿದ್ದನ್ನು ಕಂಡು ನಿನಗೆ ಊಟ ಕೊಟ್ಟೆವು? ಇಲ್ಲವೆ ನೀನು ಬಾಯಾರಿದ್ದನ್ನು ಕಂಡು ಕುಡಿಯುವುದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾಗಿರುವುದನ್ನು ಕಂಡು ಆಶ್ರಯ ನೀಡಿದೆವು? ಇಲ್ಲವೆ ನಿನಗೆ ಬಟ್ಟೆಯಿಲ್ಲದ್ದನ್ನು ಕಂಡು ಉಡುವುದಕ್ಕೆ ಕೊಟ್ಟೆವು? ಯಾವಾಗ ನೀನು ಅಸ್ವಸ್ಥನಾಗಿದ್ದಾಗ ಅಥವಾ ಸೆರೆಮನೆಯಲ್ಲಿ ಇದ್ದುದನ್ನು ಕಂಡು ನಿನ್ನನ್ನು ನೋಡುವುದಕ್ಕೆ ಬಂದೆವು’ ಎಂದು ಕೇಳುವರು. ಅದಕ್ಕೆ ಉತ್ತರವಾಗಿ ಅರಸನು, ‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.
ನಿನ್ನನ್ನು ಕೇಳುವವನಿಗೆ ಕೊಡು; ನಿನ್ನಲ್ಲಿ ಬೇಡಲು ಬಂದವನಿಗೆ ಮುಖ ತಿರುಗಿಸಿಕೊಳ್ಳಬೇಡ.
ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.
ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು" ಅಂದನು.
ಆಗ ಆ ಗುಂಪಿನವರು, "ಹಾಗಾದರೆ ನಾವೇನು ಮಾಡಬೇಕು?" ಎಂದು ಆತನನ್ನು ಕೇಳಿದ್ದಕ್ಕೆ, ಆತನು, "ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ" ಎಂದು ಅವರಿಗೆ ಹೇಳಿದನು.
ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ. ನಿಮ್ಮ ಗಂಟು ಇದ್ದಲ್ಲಿಯೇ ನಿಮ್ಮ ಮನಸ್ಸು ಇರುತ್ತದಷ್ಟೆ.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು" ಅಂದನು.
ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು. ಬಳಿಕ ಪೌಲನು; "ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ" ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು. ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.
ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
ನೆರೆಯವನ ಹಿತವನ್ನೂ ಬಯಸುವವನಾಗು
ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
ನಂಬಿಕೆಯೊಂದೇ ಸಾಲದು ಅದರಂತೆ ನಡೆಯಬೇಕೆಂಬ ಬೋಧನೆ
ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ? ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ, ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ "ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ" ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು,
ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, "ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು" ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.