Ajuda para casais
Deus fortalece casamentos. A Bíblia oferece sabedoria prática para casais: comunicar com verdade, perdoar com graça, servir com amor e buscar a Deus juntos.
Amor e respeito
Maridos, amai vossas mulheres. Mulheres, respeitem seus maridos. O amor mútuo edifica o casamento.
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು "ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ." ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
"ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. ಸೈತಾನನಿಗೆ ಅವಕಾಶಕೊಡಬೇಡಿರಿ.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
União e fidelidade
O que Deus ajuntou não separe o homem. Eu e minha casa serviremos ao Senhor. A fidelidade é alicerce do casamento.
ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು" ಎಂದನು.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಕ್ರೈಸ್ತೀಯ ಕುಟುಂಬದ ನಿಯಮಗಳು
ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
Perdão e paciência
Sede bondosos e compassivos uns com os outros. O amor é paciente, benigno. Permanece e persevera.
ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಒಂದು ವೇಳೆ ಅಗಲಿದರೂ ಮದುವೆಯಾಗದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಂಧಾನವಾಗಿರಬೇಕು ಮತ್ತು ಗಂಡನು ಹೆಂಡತಿಗೆ ವಿಚ್ಛೇದನ ನೀಡಬಾರದು.
ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ ಹೆಂಡತಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ ಅದು ಹೆಂಡತಿಗುಂಟು. ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
ಪತ್ನಿಲಾಭವು ರತ್ನಲಾಭ,
ಅದು ಯೆಹೋವನ ಅನುಗ್ರಹವೇ.