Ajuda para casais
Deus fortalece casamentos. A Bíblia oferece sabedoria prática para casais: comunicar com verdade, perdoar com graça, servir com amor e buscar a Deus juntos.
Amor e respeito
Maridos, amai vossas mulheres. Mulheres, respeitem seus maridos. O amor mútuo edifica o casamento.
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.
"ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ. ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.
ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.
União e fidelidade
O que Deus ajuntou não separe o homem. Eu e minha casa serviremos ao Senhor. A fidelidade é alicerce do casamento.
ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು," ಎಂದು ಹೇಳಿದರು.
ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು," ಎಂದನು.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
ವಿಶ್ವಾಸಿಗಳ ಕುಟುಂಬಗಳಿಗಾಗಿ ನಿಯಮಗಳು
ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.
ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ. ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
Perdão e paciência
Sede bondosos e compassivos uns com os outros. O amor é paciente, benigno. Permanece e persevera.
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.
ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.
ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ. ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ. ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.
ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ. ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.