Alegria e felicidade
A alegria é fruto do Espírito e marca do cristão. Alegrai-vos sempre no Senhor! A Bíblia ensina que a alegria de Deus é nossa fortaleza — não depende de circunstâncias, mas da presença de Deus.
Alegrai-vos no Senhor
Alegrai-vos sempre no Senhor! Outra vez digo: alegrai-vos! Na presença de Deus há plenitude de alegria eterna.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ;
ನನ್ನ ಮನವು ಉಲ್ಲಾಸಗೊಳ್ಳುತ್ತದೆ;
ನನ್ನ ಶರೀರವೂ ಸುರಕ್ಷಿತವಾಗಿರುವುದು.
ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು;
ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು.
ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.
ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ;
ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. ಸೆಲಾ
ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು
ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ;
ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು;
ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.
Fruto do Espírito
O fruto do Espírito é amor, alegria, paz. A alegria do Senhor é nossa fortaleza — não depende do mundo.
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ಇದಲ್ಲದೆ ನೆಹೆಮೀಯನು ಅವರಿಗೆ, "ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ" ಎಂದನು.
ಇದಲ್ಲದೆ ನೆಹೆಮೀಯನು ಅವರಿಗೆ, "ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ" ಎಂದನು.
ಈ ದಿನವು ಯೆಹೋವನಿಂದಲೇ ನೇಮಕವಾದದ್ದು;
ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
ಸರ್ವಸಂಪತ್ತಿನಲ್ಲಿ ಹೇಗೋ,
ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.
ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ,
ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.
ಭಕ್ತನ ಭಾಗ್ಯ
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,
ನೀನು ಧನ್ಯನು, ನಿನಗೆ ಶುಭವಿರುವುದು.
Alegria nas tribulações
Os que semeiam em lágrimas ceifarão com alegria. Tende por motivo de grande gozo quando caídes em diversas tentações.
ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ. ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
ಆಹಾ, ಅಂಜೂರವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಸಿಕ್ಕದಿದ್ದರೂ,
ಎಣ್ಣೆ ಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗದ್ದೆಗಳು ಆಹಾರ ಧಾನ್ಯಗಳನ್ನು ಉತ್ಪತ್ತಿಮಾಡದಿದ್ದರೂ,
ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,
ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.
ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
Alegria compartilhada
Alegrai-vos com os que se alegram. O Senhor fez coisas grandiosas por nós — alegrai-vos no Senhor e regozijai-vos.
ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.
ಹೀಗೆ ನಾನು ದೇವರ ಚಿತ್ತಾನುಸಾರ ಆನಂದವುಳ್ಳವನಾಗಿ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ವಿಶ್ರಾಂತಿಹೊಂದಲಾಗುವುದು.
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
Jesus e a alegria
A minha alegria esteja em vós e a vossa alegria seja completa. Pedi e recebereis para que a vossa alegria seja plena.
ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂದೂ, ಆ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂದೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.
ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು.
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
Alegria eterna
Alegria eterna terão sobre suas cabeças. O Senhor reinará com alegria sobre o seu povo para todo o sempre.
ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ.
ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ,
ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ" ಎಂಬುದೇ.
ಯೆಹೋವನು ವಿಮೋಚಿಸಿದವರು ಹಿಂದಿರುಗಿ,
ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು.
ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು;
ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು;
ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು;
ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
ನಿನ್ನ ರಕ್ಷಣಾನಂದವನ್ನು ನಾನು ಪುನಃ ಅನುಭವಿಸುವಂತೆ ಮಾಡು;
ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.
ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ;
ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ,
ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ.
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ಶಿಷ್ಟನ ನಂಬಿಕೆಗೆ ಆನಂದವು ಫಲ,
ದುಷ್ಟನ ನಿರೀಕ್ಷೆ ನಿಷ್ಫಲ.
ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ!
ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ!
ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
ಧರ್ಮಿಯ ತಂದೆಯು ಅತಿ ಸಂತೋಷಪಡುವನು,
ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
ಯಾವಾಗಲೂ ಸಂತೋಷಿಸಿರಿ, ಎಡೆಬಿಡದೆ ಪ್ರಾರ್ಥನೆಮಾಡಿರಿ, ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.
ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
ಅಡಗಿಸಿದ್ದ ನಿಧಿ, ಮುತ್ತುಗಳ ಮತ್ತು ಬಲೆಯ ಸಾಮ್ಯ
"ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.