Aliança
A aliança é o modo como Deus se relaciona com seu povo. Da aliança com Noé à Nova Aliança em Cristo, Deus se compromete com amor e fidelidade irrevogáveis.
Alianças com Israel
Deus firmou aliança com Abraão, Moisés e Davi. No arco-íris, na lei, nas promessas — Ele é o Deus da aliança.
ಇದಲ್ಲದೆ ದೇವರು ನೋಹನಿಗೂ ಅವನ ಸಂಗಡ ಇದ್ದ ಅವನ ಪುತ್ರರಿಗೂ ಹೇಳಿದ್ದೇನೆಂದರೆ, "ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ."
ದೇವರು ಮತ್ತೆ ಹೇಳಿದ್ದೇನೆಂದರೆ, "ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ: ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.
ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ."
ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.
ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, "ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ ಕೇನ್ಯರೂ ಕೆನಿಜ್ಜೀಯರೂ ಕದ್ಮೋನಿಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂ ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ," ಎಂದು ಹೇಳಿದರು.
ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ: "ನಾನಾದರೋ ಈ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ: ನೀನು ಅನೇಕ ರಾಷ್ಟ್ರಗಳಿಗೆ ತಂದೆಯಾಗಿರುವೆ. ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ. ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು. ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು. ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು," ಎಂದರು.
ಇದಲ್ಲದೆ ದೇವರು ಅಬ್ರಹಾಮನಿಗೆ, "ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು. ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.
ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,
ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.
"ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ. ಅವರ ಸಂಗಡ, ಅವರ ದೇವರುಗಳ ಸಂಗಡ ಯಾವ ಒಡಂಬಡಿಕೆಯನ್ನು ಮಾಡಿಕೊಳ್ಳಬಾರದು.
ಅದಕ್ಕೆ ಯೆಹೋವ ದೇವರು, "ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.
ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.
ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.
ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.
ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.
Alianças renovadas
O povo renovava a aliança diante do Senhor. A fidelidade de Deus permanece mesmo quando o povo falha.
ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು. ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ, ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.
ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.
ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.
ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು. ಇದಲ್ಲದೆ ಅವನು ಹೋಗಿ, "ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?" ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು.
ಅದಕ್ಕವನು, "ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ," ಎಂದನು.
ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, "ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ," ಎಂದನು. ಯೋನಾತಾನನು ದಾವೀದನನ್ನು ಪ್ರೀತಿಮಾಡಿದ್ದರಿಂದ, ಅವನಿಂದ ತಿರುಗಿ ಪ್ರಮಾಣ ತೆಗೆದುಕೊಂಡನು. ಅವನು ತನ್ನ ಪ್ರಾಣವನ್ನು ಪ್ರೀತಿಮಾಡಿದ ಹಾಗೆಯೇ, ಅವನನ್ನು ಪ್ರೀತಿಮಾಡಿದನು.
ಯೆಹೋವ ದೇವರು ಮೋಶೆಗೆ, "ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ. ಆದಕಾರಣ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ," ಎಂದರು.
ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, "ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ. ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಏಕೆಂದರೆ ಅವರ ಪಿತೃಗಳ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು. ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು. ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು," ಎಂದರು.
ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು. ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರದ ಒಳಗೆ ಯೆಹೋವ ದೇವರ ಸಮ್ಮುಖದಲ್ಲಿ ಇಟ್ಟನು.
ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು. ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.
ಯೆಹೋವ ದೇವರು ಮೋಶೆಗೆ, "ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು," ಎಂದರು. ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಮೋಶೆ ಮಾಡಿದನು.
ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು. ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
Nova Aliança
Eis que dias vêm em que farei nova aliança. Jesus é mediador de uma aliança superior, fundamentada em melhores promessas.
ಯೆಹೋವ ದೇವರು ಹೇಳುವುದನ್ನು ಕೇಳಿ:
"ನಾನು ಇಸ್ರಾಯೇಲ್ ವಂಶದವರೊಂದಿಗೂ,
ಯೆಹೂದ ವಂಶದವರೊಂದಿಗೂ
ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.
ಈ ಒಡಂಬಡಿಕೆಯು ನಾನು
ಇವರ ಪೂರ್ವಜರನ್ನು ಕೈಹಿಡಿದು
ಈಜಿಪ್ಟ್ ದೇಶದಿಂದ ಕರೆದು ತಂದಾಗ,
ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ.
ನಾನು ಅವರಿಗೆ ಯಜಮಾನನಾಗಿ ಇದ್ದರೂ,
ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ
ಒಡಂಬಡಿಕೆಯು ಹೀಗಿರುವುದು," ಎಂದು ಯೆಹೋವ ದೇವರು ಹೇಳುತ್ತಾರೆ.
"ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು.
ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು.
ನಾನು ಅವರಿಗೆ ದೇವರಾಗಿರುವೆನು,
ಅವರು ನನಗೆ ಪ್ರಜೆಯಾಗಿರುವರು.
ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ
ತನ್ನ ಸಹೋದರನಿಗೂ,
‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ.
ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.
ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ಅವರ ಪಾಪಗಳನ್ನು ಇನ್ನೆಂದಿಗೂ
ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ."
"ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ? ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.
ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.
ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು. ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.
ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.
ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್. ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ. ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.
Fidelidade da aliança
A aliança de Deus é eterna. Ele não quebra seu pacto nem altera o que saiu dos seus lábios.
ಆದರೆ ಯೆಹೋವ ದೇವರ ಪ್ರೀತಿಯು
ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು,
ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.
ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು
ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.
ಮಾತ್ರವಲ್ಲದೆ, "ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ," ಎಂದು ಯೆಹೋವ ದೇವರು ಹೇಳುತ್ತಾರೆ.
" ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ," ಎಂದು ಹೇಳಿದನು.
ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು," ಎಂದು ಹೇಳಿದನು.
ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು. ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ.
ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು. ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.
"ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು
ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.
ಜಾರಿಣಿಯಿಂದಲೂ ದಾರಿತಪ್ಪಿದ
ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು.
ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ,
ದೇವರ ಸನ್ನಿಧಿಯಲ್ಲಿ ಮಾಡಿಕೊಂಡ ಒಡಂಬಡಿಕೆಯನ್ನೂ ಕಡೆಗಣಿಸಿದ್ದಾಳೆ.