Alimento
O alimento é provisão de Deus para o corpo e a alma. Jesus disse: Eu sou o pão da vida. A Bíblia ensina a receber com gratidão, partilhar com generosidade e confiar no Provedor.
O pão da vida
Jesus disse: Eu sou o pão da vida. Quem vem a mim nunca terá fome. O alimento espiritual sacia plenamente.
ಯೇಸು ಅವರಿಗೆ "ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂ ಬಾಯಾರಿಕೆಯಾಗುವುದಿಲ್ಲ.
ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ" ಎಂದನು.
ಯೇಸು, "‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ" ಅಂದನು.
ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ
"ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.
ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.
Provisão divina
Deus provê alimento em abundância. Ele multiplica pães e peixes, enche os famintos e supre toda necessidade.
ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು. ಅವರೆಲ್ಲರು ಊಟಮಾಡಿ ತೃಪ್ತರಾದರು; ನಂತರ ಉಳಿದ ತುಂಡುಗಳನ್ನು ಕೂಡಿಸಲಾಗಿ ಅವು ಹನ್ನೆರಡು ಪುಟ್ಟಿ ಆದವು.
ಆತನು ಬಾಯಾರಿದವರ ಆಶೆಯನ್ನು ಪೂರೈಸಿ,
ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
ಉದಾರಿಯು ಪುಷ್ಟನಾಗುವನು,
ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
ಸವಿನುಡಿಯು ಜೇನುಕೊಡ,
ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
ಇದಲ್ಲದೆ ನೆಹೆಮೀಯನು ಅವರಿಗೆ, "ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ" ಎಂದನು.
Gratidão e moderação
Nada trouxemos para o mundo e nada levaremos. Tudo o que fizerdes, fazei para a glória de Deus — inclusive comer e beber.
ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು. ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.
ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?
ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ. ಇವುಗಳು ಮುಂದೆ ಬರಬೇಕಾಗಿದ್ದ ಕಾರ್ಯಗಳ ಛಾಯೆಯಾಗಿವೆ, ಇವುಗಳ ನಿಜಸ್ವರೂಪವು ಕ್ರಿಸ್ತನೇ.
ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.
ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ: ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆ ಇದ್ದು ದೇಹವೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು. ಯಾವ ಜಾತಿಯ ಜಲಜಂತುಗಳಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ದೇಹವು ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅದು ನಿಮಗೆ ಅಶುದ್ಧ.
ಅಲ್ಲದೆ ದೇವರು, "ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.