Alma
A alma é a parte mais íntima do ser humano — sede da vida, dos afetos e do encontro com Deus. A Bíblia convida a cuidar da alma com zelo e a aquietá-la diante do Senhor.
A alma diante de Deus
Bendize ao Senhor, ó minha alma! A alma suspira por Deus como a corça suspira pelas águas — com sede de eternidade.
ದೇವರ ಕೃಪೆಯನ್ನು ಕೊಂಡಾಡುವುದು
ನನ್ನ ಮನವೇ, ಯೆಹೋವನನ್ನು ಕೊಂಡಾಡು;
ನನ್ನ ಸರ್ವೇಂದ್ರಿಯಗಳೇ, ಆತನ ಪವಿತ್ರ ನಾಮವನ್ನು ಕೀರ್ತಿಸಿರಿ.
ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು
ದೇವರೇ, ನೀನೇ ನನ್ನ ದೇವರು;
ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ.
ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ;
ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ,
ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು?
ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು;
ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ;
ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.
ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ
ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು.
ನನ್ನ ರಕ್ಷಣೆಯು ಆತನಿಂದಲೇ.
ನಾನು ಯೆಹೋವನನ್ನು ಎದುರುನೋಡುತ್ತೇನೆ;
ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;
ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
ನನ್ನ ತುಟಿಗಳೂ ಮತ್ತು ನೀನು ರಕ್ಷಿಸಿದ ನನ್ನ ಪ್ರಾಣವೂ
ನಿನ್ನನ್ನು ಹಾಡಿಹರಸುವವು.
ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು;
ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು.
ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು;
ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ಯೆಹೋವನೇ, ಸುಳ್ಳು ಬಾಯಿಯೂ,
ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
Cuidar da alma
Que aproveita ao homem ganhar o mundo inteiro e perder a sua alma? Buscar a Deus de toda alma é o caminho da vida.
ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
ಯೇಸು ಅವನಿಗೆ, "‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ," ಎಂದು ಹೇಳಿ
ಭೂಲೋಕದವರೆಲ್ಲರೂ ಹೋಗುವ ಮಾರ್ಗವನ್ನು ನಾನು ಈಗ ಅನುಸರಿಸಬೇಕಾಗಿದೆ. ನಿಮ್ಮ ದೇವರಾದ ಯೆಹೋವನು ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಾದದ ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿದೆ ಎಂಬುದು ನಿಮಗೆ ಮನದಟ್ಟಾಗಿದೆಯಲ್ಲ.
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
ಯೆಹೋವನ ಮಾರ್ಗವನ್ನು ತಿರಸ್ಕರಿಸಿದ ಯೆಹೂದ
ಯೆಹೋವನು, "ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು.
ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
ಸವಿನುಡಿಯು ಜೇನುಕೊಡ,
ಅದು ಆತ್ಮಕ್ಕೆ ಸಿಹಿ, ಎಲುಬಿಗೆ ಕ್ಷೇಮ.
ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.