Amor ao próximo
O amor ao próximo não é opcional — é mandamento. Amarás o teu próximo como a ti mesmo. A lei inteira se cumpre nesta palavra. O amor ao próximo é prova do amor a Deus.
ವೈರಿಗಳನ್ನು ಪ್ರೀತಿಸುವುದು
" ‘ನಿನ್ನ ನೆರೆಯವನನ್ನು ಪ್ರೀತಿಸಿ, ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.
ಪ್ರೀತಿಯು ಮೋಶೆಯ ನಿಯಮವನ್ನು ನೆರವೇರಿಸುವುದು
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.
ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ.
ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.
ಮುಕ್ತಾಯದ ಪ್ರಬೋಧನೆಗಳು
ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ. ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ. ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.
"ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!" ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.
ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ. ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ. ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.
ಸಹೋದರರ ಪ್ರೀತಿ
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.
ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.
ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.
ದೇವರ ಪ್ರೀತಿ ಮತ್ತು ನಮ್ಮ ಪ್ರೀತಿ
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ. ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.