Amor de casal
O amor de casal é celebrado na Bíblia como dom sagrado. O Cântico dos Cânticos exalta a beleza do amor conjugal — íntimo, exclusivo e forte como a morte.
ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ.
ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ.
ಪ್ರೀತಿಯು ಮರಣದಷ್ಟು ಬಲವಾಗಿದೆ.
ಮತ್ಸರವು ಸಮಾಧಿಯಷ್ಟು ಕ್ರೂರ.
ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ
ಜ್ವಾಲೆಯ ಹಾಗಿರುವುದು.
ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು.
ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು.
ಒಬ್ಬನು ತನ್ನ ಆಸ್ತಿಯನ್ನೆಲ್ಲಾ
ಪ್ರೀತಿಗೋಸ್ಕರ ಕೊಟ್ಟರೂ,
ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.
ಸ್ನೇಹಿತರು
ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ,
ನೀನು ನಿನ್ನ ಒಂದೇ ಕಿರುನೋಟದಿಂದಲೂ,
ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ,
ನನ್ನ ಹೃದಯವನ್ನು ಸೆಳಕೊಂಡಿರುವೆ.
ಬಾಯಿಯ ಮುದ್ದುಗಳಿಂದ ನನಗೆ ಮುದ್ದಿಡಲಿ,
ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ.
ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ.
ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!
ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ!
ಆಹಾ, ನೀನು ಸೌಂದರ್ಯವಂತಳೇ!
ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.
ಪ್ರಿಯತಮೆ
ನನ್ನ ಪ್ರಿಯನೇ, ಇಗೋ, ನೀನು ಎಷ್ಟು ಸೌಂದರ್ಯವಂತನು!
ಹೌದು, ರಮ್ಯವಾದವನು!
ಹಸಿರು ಚಿಗುರುಗಳೇ ನಮ್ಮ ಮಂಚವಾಗಿದೆ.
ಪ್ರಿಯಕರ
ಅನಂತರ ಯೆಹೋವ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು," ಎಂದರು.
ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.
ಆಗ ಮನುಷ್ಯನು ಹೀಗೆ ಹೇಳಿದನು:
"ಇದು ನನ್ನ ಎಲುಬಿನಿಂದಾದ ಎಲುಬು
ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ.
ಈಕೆ ನರನಿಂದ ತೆಗೆದಿರುವುದರಿಂದ,
ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು."
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ;
ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.
ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ;
ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ;
ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.
ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ?
ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?
ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು," ಎಂದು ಹೇಳಿದರು.
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ, ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ, ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ. ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ. ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.
ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಒಬ್ಬನಿಗಿಂತ ಇಬ್ಬರು ಲೇಸು,
ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು.
ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ
ಅವನ ಗತಿ ದುರ್ಗತಿಯೇ
ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ.
ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?
ಒಬ್ಬಂಟಿಗನ ಮೇಲೆ ಜಯ ಸಾಧಿಸಲು,
ಇಬ್ಬರು ಎದುರಾಗಿ ನಿಲ್ಲಬಹುದು.
ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.
ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.
ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.