amor de Deus
O amor de Deus é a maior realidade do universo. Ele nos amou com amor eterno, incondicional e sacrificial — e nada no mundo pode nos separar desse amor.
Amor eterno
Deus amou o mundo de tal maneira que deu o seu Filho. Seu amor é de eternidade a eternidade — nunca falha.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.
ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು,
"ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ.
ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.
ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು;
ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಯೆಹೋವ ದೇವರು, ಅನುಕಂಪವೂ ದಯೆಯೂ
ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.
ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು
ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.
ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು.
ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.
Natureza do amor divino
Deus é amor. O amor é paciente, benigno. O amor do Pai nos adota como filhos e nos transforma à sua imagem.
ದೇವರ ಪ್ರೀತಿ ಮತ್ತು ನಮ್ಮ ಪ್ರೀತಿ
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ. ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.
ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು. ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ. ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.
ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ.
ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ. ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ. ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.
ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.
ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,
Expressões do amor de Deus
O Senhor nos ama com alegria e canta sobre nós. Queni a mim vem, amará; e quem me ama, o Pai o amará.
ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ.
ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ.
ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು.
ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ,
ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು."
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ;
ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ,
ಪ್ರಿಯನೂ ಆಗಿರುವುದರಿಂದ
ನಾನು ನಿನಗೋಸ್ಕರ ಮನುಷ್ಯರನ್ನೂ,
ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು.
ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು
ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.
ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ
ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ.
ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.
ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು. ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.
ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.