Amor fraternal
O amor fraternal é marca dos discípulos de Cristo. Nisto conhecerão que sois meus discípulos: se tiverdes amor uns aos outros.
Amar uns aos outros
Este é o meu mandamento: que vos ameis uns aos outros como Eu vos amei. O amor fraternal é testemunho ao mundo.
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ. ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು" ಎಂದನು.
ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.
ತನ್ನ ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವುದೂ ಇಲ್ಲ.
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.
ನಾವಂತೂ ಕ್ರೈಸ್ತಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ನಿತ್ಯಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ? ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.
ದೇವರಿಂದ ಹುಟ್ಟಿದವರಲ್ಲಿ ಪ್ರೀತಿಸ್ವಭಾವವೇ ವಿಶೇಷ
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದ ಬಂದದ್ದಾಗಿದೆ ಮತ್ತು ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.
ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವೂ ಸಹ ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. ದೇವರನ್ನು ಯಾರೂ ಎಂದೂ ನೋಡಿಲ್ಲ. ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನ ಪ್ರೀತಿಯು ನಮ್ಮಲ್ಲಿ ಪರಿಪೂರ್ಣಗೊಂಡಿರುತ್ತದೆ.
ಒಬ್ಬನು, "ತಾನು ದೇವರನ್ನು ಪ್ರೀತಿಸುತ್ತೇನೆ" ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು? ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.
Expressões de amor fraternal
Amai-vos com afeição fraternal. O amor cobre multidão de pecados. Perseverai no amor fraterno.
ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
ನೀತಿಗಾಗಿ ಬಾಧೆಯನ್ನನುಭವಿಸುವುದು
ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
ದೇವರನ್ನು ಮೆಚ್ಚಿಸುವುದು ಹೇಗೆ
ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ. ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ. ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಯೇಸು ಅವನಿಗೆ, "‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ "ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು" ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.