Amor próprio
O amor próprio saudável reconhece o valor que Deus nos deu. Fomos criados à imagem de Deus, maravilhosamente formados. Aceitar-se é honrar o Criador.
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ದೇವರೇ, ನಿನ್ನ ಸಂಕಲ್ಪಗಳು ನನ್ನ ಎಣಿಕೆಯಲ್ಲಿ ಎಷ್ಟೋ ಗೌರವವಾಗಿವೆ,
ಅವುಗಳು ಎಷ್ಟೋ ಅಸಂಖ್ಯವಾಗಿವೆ.
ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ,
ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ.
ನಿನ್ನ ಕೈಕೆಲಸವಾಗಿರುವ ಆಕಾಶಮಂಡಲವನ್ನೂ,
ನೀನು ಉಂಟುಮಾಡಿದ ಚಂದ್ರ ಮತ್ತು ನಕ್ಷತ್ರಗಳನ್ನೂ ನಾನು ನೋಡುವಾಗ,
ಮನುಷ್ಯನು ಎಷ್ಟು ಮಾತ್ರದವನು,
ಅವನನ್ನು ನೀನು ಏಕೆ ಸ್ಮರಿಸಬೇಕು?
ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ;
ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ.
ಆತನು ದೀನರನ್ನು ಧೂಳಿನಿಂದ ಎಬ್ಬಿಸಿ,
ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.
ಪ್ರಭುಗಳ ಜೊತೆಯಲ್ಲಿ,
ಅಂದರೆ ಅವರ ಜನಾಧಿಪತಿಗಳೊಡನೆ ಅವರನ್ನು ಕುಳ್ಳಿರಿಸುತ್ತಾನೆ.
ಆದರೆ ಯೆಹೋವನು ಸಮುವೇಲನಿಗೆ, "ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ" ಅಂದನು.
ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.
ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.