Amor próprio
O amor próprio saudável reconhece o valor que Deus nos deu. Fomos criados à imagem de Deus, maravilhosamente formados. Aceitar-se é honrar o Criador.
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.
ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ!
ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!
ನಾನು ಅವುಗಳನ್ನು ಎಣಿಸಿದರೆ,
ಅವು ಮರಳಿಗಿಂತಲೂ ಹೆಚ್ಚಾಗಿವೆ!
ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.
ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ
ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ
ನಾನು ನೋಡಿದಾಗ,
ನೀವು ಮಾನವರನ್ನು ನೆನಸಲು ಅವರು ಎಷ್ಟರವರು?
ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?
ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ,
ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.
ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ,
ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ.
ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ.
ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.
ಆದರೆ ಯೆಹೋವ ದೇವರು ಸಮುಯೇಲನಿಗೆ, "ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು," ಎಂದನು.
ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.
ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.
ಕ್ರಿಸ್ತನ ದೇಹದಲ್ಲಿನ ದೀನಸೇವೆ
ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.