Ânimo
O ânimo vem de Deus. Ele nos fortalece, nos encoraja e renova nossas forças. Quando o desânimo chega, as promessas de Deus nos levantam e nos impulsionam a seguir em frente.
ಗಂಡಾಂತರದಲ್ಲಿ ಭಕ್ತನ ನಂಬಿಕೆ
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ನೀತಿವಂತರ ರಕ್ಷಣೆ ಯೆಹೋವನಿಂದಲೇ;
ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
ನಾನು ಮೊರೆಯಿಟ್ಟಾಗ ಸದುತ್ತರವನ್ನು ದಯಪಾಲಿಸಿದಿ;
ನನ್ನ ಆತ್ಮಕ್ಕೆ ಬಲಕೊಟ್ಟು ನನ್ನನ್ನು ಧೈರ್ಯಪಡಿಸಿದ್ದೀ.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಅದಕ್ಕೆ ಜನರು, "ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ. ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
ಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದು
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.