Aniversário de idoso
O aniversário de um idoso é celebração de uma vida longa e cheia de experiências com Deus. A Bíblia honra os cabelos brancos como coroa de glória e prova da fidelidade divina.
ವಿಮುಕ್ತರ ಕೊಂಡಾಟ
ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ;
ಆತನು ಒಳ್ಳೆಯವನು.
ಆತನ ಕೃಪೆಯು ಶಾಶ್ವತವಾಗಿರುವುದು.
ಈ ದಿನವು ಯೆಹೋವನಿಂದಲೇ ನೇಮಕವಾದದ್ದು;
ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು;
ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ;
ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ
ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.
ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ;
ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ;
ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.
ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ,
ಆತನ ಪ್ರಸನ್ನತೆಯನ್ನು ನೋಡುವುದಕ್ಕೂ,
ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ
ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು
ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.
ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು;
ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
ನರೆಗೂದಲೇ ಸುಂದರ ಕಿರೀಟವು,
ಅದು ಧರ್ಮಮಾರ್ಗದಲ್ಲಿ ದೊರಕುವುದು.
ಯುವಕರಿಗೆ ಬಲವು ಭೂಷಣ,
ಮುದುಕರಿಗೆ ನರೆಯು ಒಡವೆ.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ. ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
Este artigo te tocou? Faça uma oração!
+581 estão orando agora.
Junte-se à corrente de oração.