Anjos
Os anjos são seres celestiais criados por Deus para servir, adorar e executar seus propósitos. A Bíblia revela anjos mensageiros, guerreiros e protetores ao longo de toda a história redentora.
ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, "ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.
ಆಗ ದೂತನು ಆ ಹೆಂಗಸರಿಗೆ, "ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು; ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?
ಆ ದೂತನು ಆಕೆಗೆ, "ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ. ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸುವೆಂದು ಹೆಸರಿಡಬೇಕು.
ಆ ದೂತನು ಅವರಿಗೆ, "ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ.
ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು,
"ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ,
ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ"
ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ" ಅಂದನು.
ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. "ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು" ಎಂದು ಹೇಳಿದರು.
ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ. ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ಪ್ರೀತಿಯಿಲ್ಲದವನಾಗಿದ್ದರೆ ನಾದಕೊಡುವ ಕಂಚಿನ ಜಾಗಟೆ, ಗಣಗಣಿಸುವ ಘಂಟೆ ಆಗಿದ್ದೇನೆ.
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ,
ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು,
ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು,
ದೇವದೂತರಿಗೆ ಕಾಣಿಸಿಕೊಂಡನು,
ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು,
ಲೋಕದಲ್ಲಿ ನಂಬಲ್ಪಟ್ಟನು,
ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.
ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ, ಮಹತ್ವಗಳಾಗಲಿ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲು ಸಾಧ್ಯವಿಲ್ಲವೆಂದು ನಾವು ಬಲ್ಲವರಾಗಿದ್ದೇವೆ.