Ascensão
A ascensão de Jesus ao céu é a coroação de sua obra redentora. Ele subiu à destra do Pai, de onde voltará com poder e glória para buscar os seus.
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
ಆತನು ಹೋಗುತ್ತಿರುವಾಗ ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಾ ಇರಲಾಗಿ ಶುಭ್ರ ವಸ್ತ್ರಧಾರಿಗಳಾದ ಇಬ್ಬರು ಪುರುಷರು ಫಕ್ಕನೆ ಅವರ ಹತ್ತಿರ ನಿಂತುಕೊಂಡರು. "ಗಲಿಲಾಯದವರೇ, ನೀವು ಏಕೆ ಹೀಗೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಗೆ ಸೇರಿಸಲ್ಪಟ್ಟಿರುವ ಈ ಯೇಸುವು ಯಾವ ರೀತಿಯಲ್ಲಿ ಆಕಾಶದೊಳಗೆ ಹೋಗಿರುವುದನ್ನು ನೀವು ಕಂಡಿರೋ ಹಾಗೆಯೇ ಆತನು ಹಿಂತಿರುಗಿ ಬರುವನು" ಎಂದು ಹೇಳಿದರು.
ಯೇಸು ಪರಲೋಕಕ್ಕೆ ಒಯ್ಯಲ್ಪಟ್ಟದ್ದು
ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
ಯೇಸುವಿನ ಸ್ವರ್ಗಾರೋಹಣವು
ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
"ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.
ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ" ಎಂದನು.
ಯೇಸು ಆಕೆಗೆ, "ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು" ಎಂದನು.
ಆಗ ಯೇಸು ಅವರಿಗೆ "ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ,
ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು,
ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು,
ದೇವದೂತರಿಗೆ ಕಾಣಿಸಿಕೊಂಡನು,
ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು,
ಲೋಕದಲ್ಲಿ ನಂಬಲ್ಪಟ್ಟನು,
ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.