Ascensão
A ascensão de Jesus ao céu é a coroação de sua obra redentora. Ele subiu à destra do Pai, de onde voltará com poder e glória para buscar os seus.
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು, "ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು," ಎಂದು ಹೇಳಿದರು.
ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.
ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು. ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.
ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ," ಎಂದರು.
ಯೇಸು ಆಕೆಗೆ, "ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು," ಎಂದರು.
ಯೇಸು ಅವರಿಗೆ, "ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.
ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ:
"ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು.
ಆತ್ಮದಲ್ಲಿ ರುಜುಪಡಿಸಲಾದರು.
ದೂತರಿಗೆ ಕಾಣಿಸಿಕೊಂಡರು,
ಯೆಹೂದ್ಯರಲ್ಲದವರಿಗೆ ಸಾರಲಾದರು,
ಲೋಕದಲ್ಲಿ ನಂಬಲಾದರು,
ಮಹಿಮೆಗೆ ಒಯ್ಯಲಾದರು!"