Autocontrole
O autocontrole é fruto do Espírito e virtude indispensável. A graça de Deus nos ensina a renunciar à impiedade e a viver com sobriedade, domínio próprio e piedade no mundo presente.
Fruto e virtude
O domínio próprio é fruto do Espírito. Acrescentai ao conhecimento o autocontrole. A disciplina interior produz maturidade.
ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ, ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.
ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸೋದರ ಸ್ನೇಹವನ್ನೂ ಸೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು. ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.
ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.
ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.
Dominar a si mesmo
Melhor é quem domina o seu espírito do que quem toma uma cidade. A cidade sem muros é quem não tem autocontrole.
ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ,
ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
ತನ್ನ ಸ್ವಂತ ಆತ್ಮವನ್ನು ಆಳದಿರುವವನು,
ಗೋಡೆ ಬಿದ್ದ ಹಾಳೂರಿಗೆ ಸಮಾನ.
ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು.
ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.
ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ;
ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.
ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು,
ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.
ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ;
ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವುದು
ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.
ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.
"ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು
ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.
ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.
Este artigo te tocou? Faça uma oração!
+581 estão orando agora.
Junte-se à corrente de oração.