Beleza
A verdadeira beleza vem de dentro. A Bíblia ensina que o encanto é enganoso e a formosura é vã, mas a mulher que teme ao Senhor — essa sim merece louvor.
ಸೌಂದರ್ಯವು ನೆಚ್ಚತಕ್ಕದ್ದಲ್ಲ, ಲಾವಣ್ಯವು ನೆಲೆಯಲ್ಲ,
ಯೆಹೋವನಲ್ಲಿ ಭಯಭಕ್ತಿಯುಳ್ಳವಳೇ ಸ್ತೋತ್ರಪಾತ್ರಳು.
ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ.
ಆದರೆ ಯೆಹೋವನು ಸಮುವೇಲನಿಗೆ, "ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ" ಅಂದನು.
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರ ಮುಂತಾದವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ ದೇವಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ಯುಕ್ತವಾಗಿರುವ ಪ್ರಕಾರ ಸತ್ಕ್ರಿಯೆಗಳಿಂದಲೇ ಅಲಂಕರಿಸಿಕೊಳ್ಳಬೇಕು.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ನನ್ನ ಪ್ರಿಯಳೇ, ನೀನು ಸರ್ವಾಂಗಸುಂದರಿ,
ನಿನ್ನಲ್ಲಿ ಯಾವ ಕೊರತೆಯೂ ಇಲ್ಲ.
ಹೀಗೆ ದೇವರು;
"ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು."
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಯೆರೂಸಲೇಮಿನ ಮುಂದಿನ ಮಹಾವೈಭವವು
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು" ಎಂದು ಉತ್ತರವಾಯಿತು.
ಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದು
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
ನಿಮ್ಮ ಅಗತ್ಯಗಳಿಗಾಗಿ ಚಿಂತಿಸಬೇಡಿರಿ
"ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.