Beleza
A verdadeira beleza vem de dentro. A Bíblia ensina que o encanto é enganoso e a formosura é vã, mas a mulher que teme ao Senhor — essa sim merece louvor.
ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ.
ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.
ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು. ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.
ಆದರೆ ಯೆಹೋವ ದೇವರು ಸಮುಯೇಲನಿಗೆ, "ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು," ಎಂದನು.
ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ, ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ;
ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ
ನಾನು ನಿಮ್ಮನ್ನು ಸ್ತುತಿಸುತ್ತೇನೆ;
ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು,
ನಾನು ಪೂರ್ಣವಾಗಿ ತಿಳಿದಿದ್ದೇನೆ.
ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿ,
ನಿನ್ನಲ್ಲಿ ದೋಷವೇನೂ ಇಲ್ಲ.
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು.
ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.
ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.
ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು,
ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು.
ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು," ಎಂದು ಉತ್ತರವಾಯಿತು.
ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.
"ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?