Bíblia
A Bíblia é a Palavra de Deus — viva, eficaz e mais cortante que espada de dois gumes. Toda Escritura é inspirada por Deus e útil para ensinar, repreender, corrigir e instruir em justiça.
Inspiração divina
Toda Escritura é inspirada por Deus. Homens santos falaram da parte de Deus movidos pelo Espírito Santo.
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ. ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.
Poder da Palavra
A Palavra de Deus é viva e eficaz. O céu e a terra passarão, mas as minhas palavras jamais passarão.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
ಯೇಸು, "‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ" ಅಂದನು.
ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ,
ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,
ಹಾಗೆಯೇ ನನ್ನ ಬಾಯಿಂದ ಹೊರಟ ಮಾತು, ನನ್ನ ಇಷ್ಟಾರ್ಥವನ್ನು ನೆರವೇರಿಸಿ,
ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.
ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.
ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು."
ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ನಿನ್ನ ವಾಕ್ಯದ ಸಾರಾಂಶವು ಸತ್ಯವೇ,
ನಿನ್ನ ನೀತಿವಿಧಿಗಳೆಲ್ಲಾ ಯುಗಯುಗಾಂತರಕ್ಕೂ ಇರುವವು.
ಷಿನ್.
Estudar e pregar
Os bereanos examinavam as Escrituras diariamente. Procura apresentar-te a Deus aprovado como obreiro que maneja bem a Palavra.
ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.
ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ, ಆಯಾ ವಾಕ್ಯಗಳ ಅರ್ಥವನ್ನು ವಿವರಿಸಿ; ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತು, ಎದ್ದು ಬರುವುದು ಅಗತ್ಯವೆಂತಲೂ "ನಾನು ನಿಮಗೆ ಪ್ರಸಿದ್ಧಿಪಡಿಸುವ ಯೇಸುವೇ ಆ ಕ್ರಿಸ್ತನೆಂತಲೂ" ಸ್ಥಿರಪಡಿಸಿದನು.
ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, "ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?" ಎಂದು ಕೇಳಿದನು. ಅದಕ್ಕೆ ಅವನು, "ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?" ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು. ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ,
"ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು;
ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ
ಆತನು ಬಾಯಿ ತೆರೆಯದೆ ಮೌನವಾಗಿದ್ದನು.
ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.
ಯೇಸು ಅವರಿಗೆ, "ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ, ಕ್ರಿಸ್ತನು ಇಂಥ ಶ್ರಮೆಗಳನ್ನು ಅನುಭವಿಸಿ ತನ್ನ ಮಹಿಮಾಪದವಿಗೆ ಸೇರುವುದು ಅಗತ್ಯವಾಗಿತ್ತಲ್ಲವೇ" ಎಂದು ಹೇಳಿದನು. ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
ಯೇಸು ಅವರ ಹತ್ತಿರಕ್ಕೆ ಬಂದು, "ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ. ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ" ಎಂದು ಹೇಳಿದನು.
‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.
Revelação e fidelidade
A Palavra do Senhor veio aos profetas. A graça de Deus se manifestou na Escritura para a salvação de todos.
ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,
ಪೆತೂವೇಲನ ಮಗನಾದ ಯೋವೇಲನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು,
ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.
ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
ಆಗ ಯೆಹೋವನು ಯೆಶಾಯನಿಗೆ,
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ,
ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.
ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
Viver pela Palavra
Não só de pão vive o homem. Nada acrescentes nem diminuas. A Palavra é alimento, guia e espada do cristão.
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು,
ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ,
ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.
ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.
ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.
ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? ಇದಕ್ಕೆ ಸರಿಯಾಗಿ "ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ" ಎಂದು ಬರೆದಿದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, "ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?" ಎಂದು ನುಡಿಯುತ್ತಾನೆ. ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ. ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. "ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ" ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
ನಾವು ಇಹಲೋಕದ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವ ವರಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದವರಾಗಿದ್ದೇವೆ. ಇವುಗಳನ್ನು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಹೇಳದೆ ಪವಿತ್ರಾತ್ಮನೇ ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮೀಕವಾದವುಗಳನ್ನು ಆತ್ಮೀಕರಾದವರಿಗೆ ಯುಕ್ತವಾದ ರೀತಿಯಲ್ಲಿ ಸ್ಪಷ್ಟಪಡಿಸುತ್ತೇವೆ. ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.
ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ, ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ. ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.