Bíblia
A Bíblia é a Palavra de Deus — viva, eficaz e mais cortante que espada de dois gumes. Toda Escritura é inspirada por Deus e útil para ensinar, repreender, corrigir e instruir em justiça.
Inspiração divina
Toda Escritura é inspirada por Deus. Homens santos falaram da parte de Deus movidos pelo Espírito Santo.
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ. ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ. ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ. ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.
ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.
ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.
ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.
Poder da Palavra
A Palavra de Deus é viva e eficaz. O céu e a terra passarão, mas as minhas palavras jamais passarão.
ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಅದಕ್ಕೆ ಯೇಸು, "ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’" ಎಂದರು.
ಮಳೆಯೂ, ಹಿಮವೂ ಆಕಾಶದಿಂದ ಬಿದ್ದು,
ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ,
ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು,
ಉಣ್ಣುವವನಿಗೆ ಆಹಾರವನ್ನು
ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ
ಹಿಂದಿರುಗುವುದಿಲ್ಲವೋ, ಹಾಗೆಯೇ
ನನ್ನ ಬಾಯಿಂದ ಹೊರಟ ಮಾತು
ನನ್ನ ಇಷ್ಟಾರ್ಥವನ್ನು ನೆರವೇರಿಸಿ,
ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು
ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.
ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.
ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.
ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು."
ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.
ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು?
ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.
ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ;
ನಿಮ್ಮ ನೀತಿ ನಿಯಮಗಳೆಲ್ಲಾ ನಿತ್ಯವಾದವುಗಳೇ.
ש ಸೀನ್ ಮತ್ತು ಷೀನ್
Estudar e pregar
Os bereanos examinavam as Escrituras diariamente. Procura apresentar-te a Deus aprovado como obreiro que maneja bem a Palavra.
ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.
ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ, ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, "ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ," ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.
ಫಿಲಿಪ್ಪನು ರಥದ ಹತ್ತಿರಕ್ಕೆ ಓಡಿದನು. ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥ ಓದುತ್ತಿರುವುದನ್ನು ಕೇಳಿಸಿಕೊಂಡು, "ನೀವು ಓದುತ್ತಿರುವುದು ನಿಮಗೆ ಅರ್ಥವಾಗುತ್ತಿದೆಯೇ?" ಎಂದು ಫಿಲಿಪ್ಪನು ಪ್ರಶ್ನಿಸಿದನು.
ಅವನು, "ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?" ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.
ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು:
"ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು.
ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು.
ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.
ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.
ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.
ಆಗ ಯೇಸು ಅವರಿಗೆ, "ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ! ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?" ಎಂದು ಹೇಳಿ, ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.
ಯೇಸು ಬಂದು ಅವರೊಂದಿಗೆ ಮಾತನಾಡಿ, "ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ. ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ, ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ," ಎಂದರು.
ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.
Revelação e fidelidade
A Palavra do Senhor veio aos profetas. A graça de Deus se manifestou na Escritura para a salvação de todos.
ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ,
ಪೆತುಯೇಲನ ಮಗನಾದ ಯೋಯೇಲನಿಗೆ ಬಂದ ಯೆಹೋವ ದೇವರು ವಾಕ್ಯವು:
ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:
ಒಂದು ಪ್ರವಾದನೆ: ಇಸ್ರಾಯೇಲಿಗೆ ಮಲಾಕಿಯನ ಮುಖಾಂತರ ಬಂದ ಯೆಹೋವ ದೇವರ ವಾಕ್ಯ:
ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,
ಆಗ ಯೆಹೋವ ದೇವರ ವಾಕ್ಯವು ಯೆಶಾಯನಿಗೆ ಬಂದಿತು,
ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ.
ಏಕೆಂದರೆ ಯೆಹೋವ ದೇವರು
ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಮುರಿದ ಹೃದಯಗಳನ್ನು ಕಟ್ಟುವುದಕ್ಕೂ,
ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು
ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು
ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ,
ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ,
ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,
ಚೀಯೋನಿನಲ್ಲಿ ದುಃಖಿಸುವವರಿಗೆ
ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ,
ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ,
ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು
ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ.
ಆಗ ಅವರಿಗೆ ನೀತಿವೃಕ್ಷಗಳೆಂದೂ,
ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ
ನೆಟ್ಟ ಗಿಡಗಳೆಂದೂ ಹೆಸರಾಗುವುದು.
Viver pela Palavra
Não só de pão vive o homem. Nada acrescentes nem diminuas. A Palavra é alimento, guia e espada do cristão.
"ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು;
ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.
ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ.
ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.
ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು. ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.
ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ. ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ. ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.
ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ. ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.
ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.
ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ? ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, "ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!" ಎಂದು ಬರೆಯಲಾಗಿದೆ.
ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, "ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?" ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ. ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ. ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. "ನೀತಿವಂತನು ನಂಬಿಕೆಯಿಂದಲೇ ಬದುಕುವನು," ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ. ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ. ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.
ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.
ಯೆಹೂದ್ಯರು ಆಶ್ಚರ್ಯಕರವಾದ ಗುರುತುಗಳನ್ನು ಹುಡುಕುತ್ತಾರೆ. ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ. ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ. ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.
ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.
ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.