Bom dia
Cada manhã é presente de Deus. As misericórdias do Senhor se renovam cada dia. A Bíblia convida a começar o dia com louvor, oração e gratidão ao Criador.
Manhã com Deus
De manhã te apresentarei a minha oração. Pela manhã ouvirás a minha voz — eu te busco ao despertar.
ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು;
ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ,
ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.
ನಾನಾದರೋ ಯೆಹೋವನೇ, ನಿನಗೆ ಮೊರೆಯಿಡುತ್ತೇನೆ;
ಮುಂಜಾನೆಯಲ್ಲಿ ನನ್ನ ವಿಜ್ಞಾಪನೆಯು ನಿನ್ನ ಮುಂದೆ ಬರುವುದು.
ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ.
ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ
ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು;
ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ
ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು;
ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.
ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,
ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ;
ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ.
ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು;
ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
ನಾನಾದರೋ ನಿರಪರಾಧಿಯು; ನಿನ್ನ ಸಾನ್ನಿಧ್ಯವನ್ನು ಸೇರುವೆನು.
ನಾನು ಎಚ್ಚತ್ತಾಗ ನಿನ್ನ ನೀತಿಸ್ವರೂಪ ದರ್ಶನದಿಂದ ತೃಪ್ತನಾಗಿರುವೆನು.
Misericórdias renovadas
As misericórdias do Senhor se renovam cada manhã. Este é o dia que o Senhor fez — alegremo-nos e nos regozijemos nele.
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
"ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು" ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
ಈ ದಿನವು ಯೆಹೋವನಿಂದಲೇ ನೇಮಕವಾದದ್ದು;
ಇದರಲ್ಲಿ ನಾವು ಉಲ್ಲಾಸದಿಂದ ಆನಂದಿಸೋಣ.
ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ;
ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.
ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ಆತನ ಕೋಪವು ಕ್ಷಣಮಾತ್ರವೇ;
ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು;
ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ,
ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.
ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ,
ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ;
ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು;
ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.
Louvor matinal
Saciai-nos de manhã com a tua benignidade. Todo dia te louvarei e celebrarei o teu nome para sempre.
ಯೆಹೋವನ ಕೃಪೆ ಪ್ರಭಾವಗಳಿಗಾಗಿ ಕೊಂಡಾಟ
ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು,
ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
ಪ್ರತಿದಿನವೂ ನಿನ್ನನ್ನು ಕೀರ್ತಿಸುವೆನು,
ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಸ್ತುತಿಸುವೆನು.
ದೇವರ ನೀತಿಸಾಧನೆಗಳನ್ನು ಹೊಗಳುವುದು
ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
ರಾಜಾಧಿರಾಜನಾದ ಯೆಹೋವನ ಆಗಮನ
ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ;
ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ.
ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
ಜನಾಂಗಗಳಲ್ಲಿ ಆತನ ಘನತೆಯನ್ನೂ,
ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
ಜ್ಞಾನವಂತರನ್ನಾಗಿ ಮಾಡುವ ಧರ್ಮಶಾಸ್ತ್ರ
ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ,
ದಿನವೆಲ್ಲಾ ಅದೇ ನನ್ನ ಧ್ಯಾನ.
ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು;
ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು.
ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.
ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
ಯೆಹೋವನ ಸೇವಕನ ಭರವಸೆ
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ
ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ.
ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
Graça para o novo dia
O Senhor te abençoe e te guarde. Cada novo dia é oportunidade de viver sob a graça do Deus que nos ama.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
ಮುಂಜಾನೆ ಬೀಜ ಬಿತ್ತು;
ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ,
ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ,
ಇಲ್ಲವೇ ಒಂದು ವೇಳೆ ಎರಡೂ
ಒಳ್ಳೆಯದಾಗುವುದೋ ನಿನಗೆ ತಿಳಿಯದು.
ಇನ್ನೂ ಕತ್ತಲಿರುವಾಗಲೇ ಎದ್ದು,
ಮನೆಯವರಿಗೆ ಆಹಾರವನ್ನು, ನೀಡುವಳು
ದಾಸಿಯರಿಗೆ ದಿನದ ಕೆಲಸಗಳನ್ನು ಹಂಚುವಳು.
ನಿದ್ರಾನಿರತನಾಗಿರಬೇಡ! ಬಡವನಾದೀಯೆ,
ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.
ಸೃಷ್ಟಿಯ ಎರಡನೆಯ ವಿವರಣೆ
ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು. ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ "ಹಗಲು" ಎಂದೂ, ಕತ್ತಲೆಗೆ "ಇರುಳು" ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.
ನಾವು ಎಚ್ಚರವಾಗಿದ್ದರೂ ಸರಿಯೇ ಅಥವಾ ನಿದ್ರೆಯಲ್ಲಿದ್ದರೂ ಸರಿಯೇ, ತನ್ನ ಜೊತೆಯಲ್ಲಿಯೇ ಜೀವಿಸಬೇಕೆಂದು ಯೇಸು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟನು.