O que é bom
O que é bom vem de Deus. A Bíblia celebra a bondade divina e nos convida a discernir, praticar e desfrutar tudo o que é bom — porque toda boa dádiva vem do Pai das luzes.
ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ;
ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು.
ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ
ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.
ದೇವರ ನೀತಿಸಾಧನೆಗಳನ್ನು ಹೊಗಳುವುದು
ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ,
ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
ಯೆಹೋವನು ಒಳ್ಳೆಯವನು;
ಆತನ ಕೃಪೆಯು ಯುಗಯುಗಕ್ಕೂ,
ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
ಐಕಮತ್ಯವು ಶ್ರೇಷ್ಠವಾದುದು
ಆಹಾ, ಸಹೋದರರು ಒಂದಾಗಿರುವುದು,
ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
ನಾನು ನಿಮಗೆ ಸುಬೋಧೆಯನ್ನು ಮಾಡುವೆನು,
ನನ್ನ ಉಪದೇಶವನ್ನು ಬಿಡಬೇಡಿರಿ.
ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ!
ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
ಕಂದಾ, ಜೇನು ಚೆನ್ನಾಗಿದೆಯಲ್ಲವೆ,
ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ,
ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು,
ನಿನ್ನ ನಿರೀಕ್ಷೆಯು ನಿರರ್ಥಕವಾಗದು.
ಜ್ಞಾನವು ಸ್ವತ್ತಿನಂತೆ ಪ್ರಯೋಜನಕರ.
ಇದು ಲೋಕದಲ್ಲಿ ಜೀವಿಸುವವರಿಗೆ ಸ್ವತ್ತಿಗಿಂತ ಉತ್ತಮೋತ್ತಮವಾಗಿದೆ.
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವುದು ಒಳ್ಳೇಯದು.
ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ.
ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು,
ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು
ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?
ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.
ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.
ಸಭೆಯ ಪ್ರಾರ್ಥನೆ ಮತ್ತು ಆರಾಧನೆ
ಎಲ್ಲಾದಕ್ಕಿಂತ ಮೊದಲು ಎಲ್ಲಾ ಜನರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ, ಪ್ರಾರ್ಥನೆಗಳನ್ನೂ, ಮನವಿಗಳನ್ನೂ, ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಕೇಳಿಕೊಳ್ಳುತ್ತೇನೆ. ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ, ಗೌರವದಿಂದಲೂ ಜೀವಿಸುವಂತೆ, ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.
ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ. ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ.
ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ."