O que é bom
O que é bom vem de Deus. A Bíblia celebra a bondade divina e nos convida a discernir, praticar e desfrutar tudo o que é bom — porque toda boa dádiva vem do Pai das luzes.
ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ;
ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.
ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು.
ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ
ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.
ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು.
ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು.
ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ
ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.
ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ
ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.
ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು.
ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.
ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು!
ಎಷ್ಟೋ ರಮ್ಯವಾದದ್ದು!
ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು,
ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.
ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ.
ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.
ಇಪ್ಪತ್ತಾರನೆಯ ಹೇಳಿಕೆ
ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ;
ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.
ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ.
ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ.
ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.
ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು;
ಅದರಿಂದ ಜೀವಂತರೆಲ್ಲರಿಗೂ ಲಾಭಕರ.
ಆತನನ್ನು ನಿರೀಕ್ಷಿಸುವವರಿಗೂ,
ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.
ಮನುಷ್ಯನು ಮೌನವಾಗಿ
ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.
ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ.
ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ
ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ
ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?
ಹೀಗಿರಲಾಗಿ, ನಿಯಮವು ಪವಿತ್ರವಾದದ್ದು. ಆಜ್ಞೆಯು ಪವಿತ್ರವೂ ನ್ಯಾಯವೂ ಒಳ್ಳೆಯದೂ ಆಗಿರುತ್ತದೆ.
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ನಿಮಗಿರುವ ಒಳ್ಳೆಯದು ಪರರ ದೂಷಣೆಗೆ ಗುರಿಯಾಗದಿರಲಿ.
ಆರಾಧನೆಯ ಕ್ರಮ
ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ. ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು. ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ.
ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ. ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ.
ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.
"ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ," ಎಂದರು.
Este artigo te tocou? Faça uma oração!
+581 estão orando agora.
Junte-se à corrente de oração.