Buscar a Deus
Buscar a Deus é o chamado mais urgente da Bíblia. Buscai primeiro o Reino de Deus. Os que buscam de todo coração encontram — porque Ele se deixa encontrar pelos que o procuram.
Buscai ao Senhor
Buscai ao Senhor enquanto se pode achar. Buscai e achareis. O Senhor recompensa os que o buscam com diligência.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,
ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ,
ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ನ್ಯಾಯತೀರ್ಪು ಮತ್ತು ರಕ್ಷಣೆ
"ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು,
ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ಯೆಹೋವನನ್ನೂ ಮತ್ತು ಆತನ ಬಲವನ್ನೂ ಆಶ್ರಯಿಸಿರಿ; ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.
ಈಗ ನನ್ನವರೆಂದು ಹೆಸರುಗೊಂಡಿರುವ ನನ್ನ ಪ್ರಜೆಗಳು ತಮ್ಮನ್ನು ತಗ್ಗಿಸಿಕೊಂಡು ತಮ್ಮ ಕೆಟ್ಟ ನಡತೆಯನ್ನು ಬಿಟ್ಟು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕುರಿತು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ, ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ದೇಶಕ್ಕೆ ಆರೋಗ್ಯವನ್ನು ದಯಪಾಲಿಸುವೆನು.
ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, "ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು.
ಆಸನಿಂದ ಧಾರ್ಮಿಕ ಸುಧಾರಣೆ
ಆಗ ಓದೇದನ ಮಗನಾದ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು. ಅವನು ಆಸನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, "ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರೇ, ಕಿವಿಗೊಡಿರಿ, ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟುಬಿಡುವನು. ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ. ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವನ ಕಡೆಗೆ ತಿರುಗಿಕೊಂಡರು. ಅವರು ಆತನನ್ನು ಹುಡುಕಿದಾಗ ಆತನು ಅವರಿಗೆ ಸಿಕ್ಕಿದನು. ಆ ಕಾಲದಲ್ಲಿ ಯಾರಿಗೂ ಸಮಾಧಾನವಾಗಿ ತಿರುಗಾಡುವುದಕ್ಕೆ ಸಾಧ್ಯವಾಗುತ್ತಾ ಇರಲಿಲ್ಲ; ದೇಶ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು. ಒಂದು ಜನಾಂಗವು ಇನ್ನೊಂದು ಜನಾಂಗವನ್ನೂ, ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳು ಮಾಡುತ್ತಿದ್ದರು. ದೇವರು ಎಲ್ಲಾ ತರಹ ಕಷ್ಟದಿಂದಲೂ ಅವರನ್ನು ತಳಮಳಗೊಳಿಸಿದ್ದನು. ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲು ಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕುವುದು" ಎಂದು ಹೇಳಿದನು.
ಆಸನು ಓದೇದನ ಮಗನಾದ ಅಜರ್ಯ ಪ್ರವಾದಿಯ ಈ ಮಾತುಗಳನ್ನು ಕೇಳಿದಾಗ ಧೈರ್ಯಗೊಂಡನು. ಯೆಹೂದ, ಬೆನ್ಯಾಮೀನ್ ಪ್ರಾಂತ್ಯಗಳಲ್ಲಿಯೂ ತಾನು ಸ್ವಾಧೀನಮಾಡಿಕೊಂಡ ಎಫ್ರಾಯೀಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲಿಯೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು. ಯೆಹೋವನ ಆಲಯಕ್ಕೆ ಸೇರಿದ ಮಂಟಪದ ಎದುರಿಗಿದ್ದ ಯೆಹೋವನ ಯಜ್ಞವೇದಿಯನ್ನು ಜೀರ್ಣೋದ್ಧಾರ ಮಾಡಿಸಿದನು. ಆ ಮೇಲೆ ಆಸನು ಎಲ್ಲಾ ಯೆಹೂದ ಬೆನ್ಯಾಮೀನ ಕುಲಗಳವರನ್ನೂ ತನ್ನ ದೇವರಾದ ಯೆಹೋವನು ತನ್ನ ಸಂಗಡ ಇರುವುದನ್ನು ನೋಡಿ ಇಸ್ರಾಯೇಲರೊಡನೆ ತನ್ನೊಡನೆ ಗುಂಪುಗುಂಪಾಗಿ ಕೂಡಿಕೊಂಡು ಯೆಹೂದ ದೇಶದಲ್ಲಿ ನೆಲಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನೂ ಕರೆಸಿಕೊಂಡನು. ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಯೆರೂಸಲೇಮಿಗೆ ಒಟ್ಟಾಗಿ ಕೂಡಿ ಬಂದರು. ಯೆಹೋವನಿಗಾಗಿ ಆ ದಿನ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯಜ್ಞಮಾಡಿದರು. ಅವರು ತಾವು ಪೂರ್ಣ ಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಿಕರ ದೇವರಾದ ಯೆಹೋವನ ಭಕ್ತರಾಗಿರುವೆವೆಂದೂ ಒಡಂಬಡಿಕೆ ಮಾಡಿದರು. ಇದಲ್ಲದೆ, ತಮ್ಮಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ಭಕ್ತಿಯನ್ನು ಬಿಟ್ಟವರು ಚಿಕ್ಕವರಾಗಲಿ, ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನೂ ಕೊಲ್ಲಲಾಗುವುದು ಎಂದು ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು. ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು. ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು. ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು. ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು. ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.
De todo o coração
Buscar-me-eis e me achareis quando me buscardes de todo o coração. O Senhor é bom para os que o buscam.
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
ನೀವು ನನ್ನನ್ನು ಹುಡುಕುವಿರಿ, ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.
ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.
ಆಗ ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ, ಪೂರ್ಣ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.
ಆತನ ಕಟ್ಟಳೆಗಳನ್ನು ಕೈಕೊಂಡು,
ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
ಆತನ ಕಟ್ಟಳೆಗಳನ್ನು ಕೈಕೊಂಡು,
ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಭಾಗ್ಯವಂತರು.
ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ,
ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
ಮನೋವ್ಯಥೆಯಿಂದ ಕಣ್ಣೀರು ಸುರಿಸುತ್ತೇನೆ,
ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಬಲಪಡಿಸು.
ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ,
ಸರಾಗವಾಗಿ ನಡೆಯುವೆನು.
ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ;
ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
ಯೆಹೋವನನ್ನೂ, ಆತನ ಬಲವನ್ನೂ ಆಶ್ರಯಿಸಿರಿ;
ನಿತ್ಯವೂ ಆತನ ದರ್ಶನವನ್ನು ಅಪೇಕ್ಷಿಸಿರಿ.
"ನನ್ನ ಸಾನ್ನಿಧ್ಯಕ್ಕೆ ಬಾ" ಎಂಬ ನಿನ್ನ ಮಾತಿಗೆ,
ನಾನು, "ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬಂದೇ ಬರುವೆನು" ಎಂದು ಉತ್ತರಕೊಟ್ಟೆನು.
ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು
ದೇವರೇ, ನೀನೇ ನನ್ನ ದೇವರು;
ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ.
ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ;
ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ,
ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.
Buscar e encontrar
Pedi e dar-se-vos-á. O Senhor está perto de todos os que o invocam em verdade. Quem o busca não ficará insatisfeito.
ಫಲದಾಯಕ ಪ್ರಾರ್ಥನೆ
"ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು. ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.
ನೀವಾದರೋ ದೇವರ ರಾಜ್ಯಕ್ಕಾಗಿ ತವಕಪಡಿರಿ. ಇದರ ಕೂಡ ಅವೂ ನಿಮಗೆ ದೊರಕುವವು.
ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು" ಎಂದು ಹೇಳಿದನು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು,
ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.
ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು;
ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಒಳಿತಿಗೆ ಕೊರತೆಯಿಲ್ಲ.
ನೀನು ಯೆಹೋವನಲ್ಲಿ ಸಂತೋಷಿಸು;
ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ,
ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,
ಸರ್ವಜ್ಞಾನಿ, ಸರ್ವವ್ಯಾಪಿ ಅದ ದೇವರು
ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳಿದುಕೊಂಡಿದ್ದೀ;
ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ,
ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.
ಅವನೇ ಯೆಹೋವನಿಂದ ಶುಭವನ್ನು ಹೊಂದುವನು;
ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
ಇಂಥವರೇ ಆತನ ದರ್ಶನವನ್ನು ಬಯಸುವವರು.
ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ
Força na busca
Buscai o bem e não o mal. Sede fortalecidos no Senhor. A busca por Deus traz renovação e plenitude de vida.
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ:
"ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
ಯೆಹೋವನು ಇಸ್ರಾಯೇಲರ ವಂಶಕ್ಕೆ ಹೀಗೆ ನುಡಿಯುತ್ತಾನೆ:
"ನೀವು ನನ್ನನ್ನು ಆಶ್ರಯಿಸಿ ಬದುಕಿಕೊಳ್ಳಿರಿ!
ಕೆಟ್ಟದ್ದನಲ್ಲ ಒಳ್ಳೆಯದನ್ನು,
ಅನುಸರಿಸಿ ಬಾಳಿರಿ.
ನೀವು ಅಂದುಕೊಂಡಂತೆ,
ಸೇನಾಧೀಶ್ವರ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು.
ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,
ದೇವರ ಸರ್ವಾಯುಧಗಳು
ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬಬೇಕು.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ" ಅಂದನು.
ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ" ಎಂದು ಉತ್ತರ ಕೊಟ್ಟನು.
ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.
ಆಗ ಸಂಸೋನನು ಯೆಹೋವನಿಗೆ, "ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು" ಎಂದು ಮೊರೆಯಿಟ್ಟು,
ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ಪತ್ನಿಲಾಭವು ರತ್ನಲಾಭ,
ಅದು ಯೆಹೋವನ ಅನುಗ್ರಹವೇ.
ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ,
ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು,
ನಿನ್ನ ನಿರೀಕ್ಷೆಯು ನಿರರ್ಥಕವಾಗದು.