Buscar a Deus
Buscar a Deus é o chamado mais urgente da Bíblia. Buscai primeiro o Reino de Deus. Os que buscam de todo coração encontram — porque Ele se deixa encontrar pelos que o procuram.
Buscai ao Senhor
Buscai ao Senhor enquanto se pode achar. Buscai e achareis. O Senhor recompensa os que o buscam com diligência.
ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ,
ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.
ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ,
ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.
"ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ.
ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು.
ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ,
‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.
ಆತನು ದಣಿದವನಿಗೆ ಶಕ್ತಿಯನ್ನೂ,
ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಯೌವನಸ್ಥರೋ ದಣಿದು ಬಳಲುವರು
ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,
ಅವರ ಮುಖವನ್ನು ಯಾವಾಗಲೂ ಹುಡುಕಿರಿ.
ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,
ಅವರ ಮುಖವನ್ನು ಯಾವಾಗಲೂ ಹುಡುಕಿರಿ.
"ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, "ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು
ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ, ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, "ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು. ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು. ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ, ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು. ದೇಶದ ನಿವಾಸಿಗಳು ಬಹಳವಾಗಿ ಹೆದರಿದ್ದರು. ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು. ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು," ಎಂದನು.
ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.
ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.
ಹೀಗೆಯೇ ಆಸನ ಆಳಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿಕೊಂಡರು. ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು. ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು. ಮಹಾಶಬ್ದದಿಂದಲೂ, ಆರ್ಭಟದಿಂದಲೂ, ತುತೂರಿಗಳ ಶಬ್ದದಿಂದಲೂ, ಕೊಂಬುಗಳ ಶಬ್ದದಿಂದಲೂ ಯೆಹೋವ ದೇವರ ಮುಂದೆ ಆಣೆ ಇಟ್ಟರು. ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.
ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು. ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು. ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು.
ಆಸನ ಆಳ್ವಿಕೆಯಲ್ಲಿ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿಲ್ಲದೆ ಇತ್ತು.
De todo o coração
Buscar-me-eis e me achareis quando me buscardes de todo o coração. O Senhor é bom para os que o buscam.
ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.
ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.
"ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ." ಇದು ಯೆಹೋವ ದೇವರಾದ ನನ್ನ ನುಡಿ.
ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.
ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ
ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು
ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ
ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು
ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ;
ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.
ನನ್ನ ಪ್ರಾಣವು ದುಃಖದಿಂದ ಬಲಹೀನವಾಗಿದೆ;
ನಿಮ್ಮ ವಾಕ್ಯದಿಂದ ನನ್ನನ್ನು ಬಲಪಡಿಸಿರಿ.
ನಿಮ್ಮ ಸೂತ್ರಗಳನ್ನು ನಾನು ಹುಡುಕುವುದರಿಂದ,
ನಾನು ಸ್ವತಂತ್ರವಾಗಿಯೇ ಜೀವಿಸುವೆನು.
ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,
ಅವರ ಮುಖವನ್ನು ಯಾವಾಗಲೂ ಹುಡುಕಿರಿ.
ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ,
ಅವರ ಮುಖವನ್ನು ಯಾವಾಗಲೂ ಹುಡುಕಿರಿ.
ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: "ದೇವರ ಮುಖವನ್ನು ಹುಡುಕು,"
ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.
ದೇವರೇ, ನನ್ನ ದೇವರು ನೀವೇ,
ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ.
ನಾನು ನಿಮಗಾಗಿ ದಾಹಗೊಂಡಿದ್ದೇನೆ.
ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ
ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ.
ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.
Buscar e encontrar
Pedi e dar-se-vos-á. O Senhor está perto de todos os que o invocam em verdade. Quem o busca não ficará insatisfeito.
"ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.
"ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು. ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.
"ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು.
ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.
ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು," ಎಂದು ಹೇಳಿದರು.
ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು,
ಏಕೆಂದರೆ ಯೆಹೋವ ದೇವರೇ,
ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.
ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು,
ಏಕೆಂದರೆ ಯೆಹೋವ ದೇವರೇ,
ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.
ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು,
ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
ಸಿಂಹಗಳು ಹಸಿದು ಬಳಲಬಹುದು,
ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.
ಯೆಹೋವ ದೇವರಲ್ಲಿ ಆನಂದವಾಗಿರು;
ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.
ದೇವರನ್ನು ಹುಡುಕುವ
ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ
ಯೆಹೋವ ದೇವರು ಸ್ವರ್ಗದಿಂದ,
ಮನುಷ್ಯರ ಮೇಲೆ ದೃಷ್ಟಿಸಿದರು.
ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ;
ನನ್ನನ್ನು ತಿಳಿದುಕೊಂಡಿದ್ದೀರಿ.
ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ;
ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.
ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು.
ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.
ಇಂಥವರೇ ದೇವರನ್ನು ಹುಡುಕುವ ಸಂತತಿಯು;
ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.
Força na busca
Buscai o bem e não o mal. Sede fortalecidos no Senhor. A busca por Deus traz renovação e plenitude de vida.
ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ:
"ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.
ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ:
"ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.
ನೀವು ಬದುಕುವ ಹಾಗೆ
ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ.
ಆಗ ನೀವು ಹೇಳಿಕೊಳ್ಳುವಂತೆ
ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.
ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.
ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ," ಎಂದರು.
ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ," ಎಂದನು.
ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.
ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, "ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,"
ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ
ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.
ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ
ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು.
ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ,
ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.
ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ.
ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ.
ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.