A carne
A carne representa a natureza pecaminosa que milita contra o Espírito. A Bíblia ensina que os que pertencem a Cristo crucificaram a carne com suas paixões e desejos.
Carne versus Espírito
Os que são segundo a carne inclinam-se para as coisas da carne. O nascido da carne é carne; o nascido do Espírito é Espírito.
ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ. ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ. ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.
ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.
ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ. ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ. ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು. ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.
ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.
ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.
ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ. ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ. ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.
ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.
ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.
ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.
Vencer a carne
Andai no Espírito e não cumprireis os desejos da carne. Os que são de Cristo crucificaram a carne com suas paixões.
ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.
ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ, ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ, ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.
ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.
ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.
ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ," ಎಂದು ಹೇಳಿದರು.
ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.