Casa de Deus
A casa de Deus é lugar de adoração, refúgio e encontro com o Sagrado. A Bíblia exalta o tabernáculo, o templo e a igreja como morada do Altíssimo entre seu povo.
A presença de Deus
Quão amáveis são os teus tabernáculos! Uma coisa pedi ao Senhor: habitar na casa do Senhor todos os dias da minha vida.
ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು
ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ.
ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ
ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.
ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ,
ಅದರ ದಯೆಯನ್ನು ನೋಡುತ್ತಾ
ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ
ಇರಬೇಕೆಂಬ ಒಂದೇ ವರವನ್ನು
ಯೆಹೋವ ದೇವರಿಂದ ಕೇಳಿಕೊಂಡು
ಅದನ್ನೇ ಹುಡುಕುತ್ತಿರುವೆನು.
ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು.
ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು.
ನಿಮ್ಮ ಪರಿಶುದ್ಧ ಮಂದಿರವಾದ
ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.
"ಯೆಹೋವ ದೇವರ ಆಲಯಕ್ಕೆ ಹೋಗೋಣ,"
ಎಂದು ಜನರು ನನ್ನನ್ನು ಕರೆದಾಗ,
ನನಗೆ ಸಂತೋಷವಾಯಿತು.
ನಿಶ್ಚಯವಾಗಿ ಶುಭವೂ ಪ್ರೀತಿಯೂ
ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ;
ನಾನು ಯೆಹೋವ ದೇವರ ಮನೆಯಲ್ಲಿ
ಸದಾಕಾಲವೂ ವಾಸಿಸುವೆನು.
ನಾನಾದರೋ ದೇವರ ಆಲಯದಲ್ಲಿರುವ
ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು.
ದೇವರ ಒಡಂಬಡಿಕೆಯ ಪ್ರೀತಿಯಲ್ಲಿ
ಯುಗಯುಗಾಂತರವೂ ಭರವಸವಿಟ್ಟಿರುವೆನು.
ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ.
ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
O templo
Minha casa será chamada casa de oração. O zelo da tua casa me consumiu. O verdadeiro templo é o corpo do cristão.
ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು. ಯೇಸು ಅವರಿಗೆ, " ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ," ಎಂದು ಹೇಳಿದರು.
ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು. ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು. ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು. ಯೇಸು ಪಾರಿವಾಳ ಮಾರುವವರಿಗೆ, "ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ," ಎಂದರು. ಯೇಸುವಿನ ಶಿಷ್ಯರು, "ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ," ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.
ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.
ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.
ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
"ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು. ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು. ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು. ಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.
"ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:
" ‘ಆಕಾಶವೇ ನನ್ನ ಸಿಂಹಾಸನ,
ಭೂಮಿಯೇ ನನ್ನ ಪಾದ ಪೀಠ.
ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ?
ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?
ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’
ಎಂದು ಕರ್ತದೇವರು ಪ್ರಶ್ನಿಸುತ್ತಾರೆ.
ಯೆಹೋವ ದೇವರು ಹೇಳುವುದೇನೆಂದರೆ:
"ಆಕಾಶವೇ ನನ್ನ ಸಿಂಹಾಸನ,
ಭೂಮಿಯೇ ನನ್ನ ಪಾದ ಪೀಠ,
ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ?
ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?
ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ.
ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ನಾನು ಕಟಾಕ್ಷಿಸುವವನು ಎಂಥವನೆಂದರೆ:
ದೀನನೂ, ಮನಮುರಿದವನೂ,
ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, "ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ," ಎಂದನು. ಅವನು ಭಯಪಟ್ಟು, "ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು," ಎಂದನು.