Casal
O casal cristão é parceria abençoada por Deus. Juntos são mais fortes. O amor mutual, a paciência e a submissão ao Senhor são os pilares do casamento que honra a Deus.
Unidos em Cristo
Eu e minha casa serviremos ao Senhor. O vínculo perfeito é o amor que tudo suporta e tudo espera.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು" ಎಂದನು.
ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.
ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಎಂದು ಹೇಳಿದನು.
O projeto divino
Não é bom que o homem esteja só. Dois são melhores do que um — e o cordão de três dobras não se rompe facilmente.
ಅನಂತರ ಯೆಹೋವನಾದ ದೇವರು, "ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು" ಅಂದನು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಆ ಮನುಷ್ಯನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು;
"ಮನುಷ್ಯನನ್ನು ತನ್ನ ಸ್ವರೂಪದಲ್ಲಿ
ಉಂಟುಮಾಡಿದನು.
ದೇವರ ಸ್ವರೂಪದಲ್ಲಿ ಅವನನ್ನು
ಉಂಟುಮಾಡಿದನು.
ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು."
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, "ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ" ಎಂದು ಅವರಿಗೆ ಹೇಳಿದನು.
ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ" ಎಂದು ಹೇಳಿದನು.
ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು.
ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ."
Amor conjugal
Maridos, amai vossas mulheres. A mulher virtuosa é achada de Deus. Cresçam juntos em graça e verdade.
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
"ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು." ಎಂದು ಬರೆದದೆಯಲ್ಲಾ.
ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು "ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ." ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ. "ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ," ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ. ಸೈತಾನನಿಗೆ ಅವಕಾಶಕೊಡಬೇಡಿರಿ. ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು. ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಪತ್ನಿಲಾಭವು ರತ್ನಲಾಭ,
ಅದು ಯೆಹೋವನ ಅನುಗ್ರಹವೇ.
ಸ್ವಾರ್ಥದಿಂದಾಗಲಿ, ಒಣ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ, ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.
ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು
ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.