Céu
O céu é a morada eterna de Deus e a esperança final do cristão. A Bíblia descreve o céu como lugar de glória, alegria e comunhão perfeita com o Criador.
A morada de Deus
Na casa de meu Pai há muitas moradas. Os céus declaram a glória de Deus — e um dia habitaremos lá eternamente.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!
ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ
ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ;
ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.
ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು;
ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.
ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ;
ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
ಭೂಮಿ, ಆಕಾಶಗಳನ್ನು ಉಂಟುಮಾಡಿದ,
ಯೆಹೋವನ ನಾಮದಲ್ಲಿ ನಮಗೆ ರಕ್ಷಣೆಯಾಗುವುದು.
ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ?
ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.
ದೇವರು ವಿಶ್ವವನ್ನು ಸೃಷ್ಟಿಸಿದ್ದು
ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು. ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
ಉನ್ನತಲೋಕದಲ್ಲಿ ಉಪ್ಪರಿಗೆಯನ್ನು ಅನೇಕ ಅಂತಸ್ತನ್ನಾಗಿ ಕಟ್ಟಿಕೊಂಡು,
ಭೂಲೋಕದ ಮೇಲೆ ಗುಮ್ಮಟವನ್ನು ಸ್ಥಾಪಿಸಿಕೊಂಡಿದ್ದಾನೆ.
ಸಮುದ್ರದ ನೀರನ್ನು ಸೇದಿ,
ಭೂಮಂಡಲದ ಮೇಲೆ ಹೊಯ್ಯುತ್ತಾನೆ,
ಯೆಹೋವನೆಂಬುವುದೇ ಆತನ ನಾಮಧೇಯ.
ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ?
ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ."
"ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.
Cidadania celestial
A nossa cidadania está nos céus. Ajuntai tesouros no céu, não na terra. O céu é a pátria do cristão.
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.
ಶಾಶ್ವತ ಸಂಪತ್ತು
"ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು.
ಯೇಸು ಅವನಿಗೆ, "ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು" ಎಂದು ಹೇಳಿದನು.
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ.
Esperança eterna
Seremos arrebatados para encontrar o Senhor nos ares. Ainda não se manifestou o que havemos de ser — mas seremos semelhantes a Ele.
ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆ ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಕರ್ತನ ಜೊತೆಯಲ್ಲಿರುವೆವು.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.
ಯೇಸುವಿನ ಸ್ವರ್ಗಾರೋಹಣವು
ಮತ್ತು ಯೇಸು ಅವರನ್ನು ಬೇಥಾನ್ಯದ ತನಕ ಕರೆದುಕೊಂಡು ಹೋಗಿ, ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು ಪರಲೋಕಕ್ಕೆ ಒಯ್ಯಲ್ಪಟ್ಟನು.
ಈ ಮಾತುಗಳನ್ನು ಅವನು ಹೇಳಿದ ಬಳಿಕ ಅವರು ನೋಡುತ್ತಿದ್ದ ಹಾಗೆಯೇ ಆತನು ಪರಲೋಕಕ್ಕೆ ಎತ್ತಲ್ಪಟ್ಟನು, ಮೋಡವೊಂದು ಆತನನ್ನು ಕವಿದುಕೊಂಡಿದ್ದರಿಂದ, ಯೇಸುವು ಅವರ ಕಣ್ಣಿಗೆ ಮರೆಯಾದನು.
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
ನಾವು ಲೋಕದೊಳಕ್ಕೆ ಏನೂ ತೆಗೆದುಕೊಂಡು ಬರಲಿಲ್ಲವಾದ್ದರಿಂದ, ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,
ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವುಂಟು
ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ
ಏನೂ ಇಲ್ಲದವನಾಗಿ ಗತಿಸಿ ಹೋಗುವನು.
ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ.