Céu
O céu é a morada eterna de Deus e a esperança final do cristão. A Bíblia descreve o céu como lugar de glória, alegria e comunhão perfeita com o Criador.
A morada de Deus
Na casa de meu Pai há muitas moradas. Os céus declaram a glória de Deus — e um dia habitaremos lá eternamente.
ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ.
ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ;
ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ.
ಹಗಲೆಲ್ಲಾ ಅವು ಮಾತನಾಡುತ್ತವೆ;
ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ.
ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ.
ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.
ನಮ್ಮ ಸಹಾಯವು ಆಕಾಶವನ್ನೂ,
ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು.
ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ?
ಇಹಲೋಕದಲ್ಲಿ ನಿಮ್ಮನ್ನಲ್ಲದೆ ಇನ್ನಾರನ್ನೂ ನಾನು ಬಯಸುವುದಿಲ್ಲ.
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು. ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.
ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು,
ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ,
ಸಮುದ್ರದ ನೀರನ್ನು ಕರೆದು,
ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ.
ಅವರ ಹೆಸರು ಯೆಹೋವ ದೇವರು.
ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ
ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ?
ಎಂದು ಯೆಹೋವ ದೇವರು ಹೇಳುತ್ತಾರೆ.
"ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?"
ಎಂದು ಯೆಹೋವ ದೇವರು ಹೇಳುತ್ತಾರೆ.
"ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.
Cidadania celestial
A nossa cidadania está nos céus. Ajuntai tesouros no céu, não na terra. O céu é a pátria do cristão.
ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.
"ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು. ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ.
ಆದರೆ ಯೇಸು, "ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ," ಎಂದರು.
ಯೇಸು ಅವನಿಗೆ, "ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು," ಎಂದು ಹೇಳಿದರು.
ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ.
Esperança eterna
Seremos arrebatados para encontrar o Senhor nos ares. Ainda não se manifestou o que havemos de ser — mas seremos semelhantes a Ele.
ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು. ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು. ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.
ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.
ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು. ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.
ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.
ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.
ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ,
ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ,
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ.
ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.
ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ,
ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು.
ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು
ತೆಗೆದುಕೊಂಡು ಹೋಗುವುದಿಲ್ಲ.