Chamada
A chamada de Deus é irrevogável. Ele nos chamou das trevas para a sua maravilhosa luz — para sermos santos, discípulos e instrumentos de sua graça no mundo.
Chamados por Deus
Fostes chamados para a liberdade. A chamada de Deus é dom irrevogável que nos convida à santidade e ao serviço.
ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. ಏಕೆಂದರೆ, "ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು" ಎಂದು ಬರೆದಿದೆಯಲ್ಲಾ.
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.
ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,
ನಿಮ್ಮನ್ನು ಕರೆದವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.
ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,
ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.
A resposta à chamada
Deus é fiel, pelo qual fostes chamados. Ele nos escolheu, nos capacitou e nos enviou com propósito eterno.
ತನ್ನ ಮಗನೂ ಹಾಗೂ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ನಂಬಿಗಸ್ತನು.
ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ.
ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
ಪೇತ್ರನು ಅವರಿಗೆ, "ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ.
ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.
ನ್ಯಾಯತೀರ್ಪು ಮತ್ತು ರಕ್ಷಣೆ
"ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು,
ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.