Compaixão
A compaixão é o coração de Deus em ação. Ele é compassivo e misericordioso, tardio em irar-se e grande em amor. Somos chamados a refletir essa compaixão no mundo.
ತಂದೆಯು ಮಕ್ಕಳನ್ನು ಕನಿಕರಿಸುವಂತೆ,
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು;
ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ;
ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.
ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ನಂಬಿಗಸ್ತಿಕೆಯು ದೊಡ್ಡದು!
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ?
ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
ಯೆಹೂದ್ಯರ ಮುಂದಿನ ವಿಧೇಯತೆ ಮತ್ತು ಸುಸ್ಥಿತಿಯೂ
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು;
ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ನಿನಗೆ ಯಾವ ದೇವರು ಸಮಾನ?
ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ,
ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ.
ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ.
ಕರುಣೆಯೇ ಆತನಿಗೆ ಇಷ್ಟ.
ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.
"ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ;
ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ನೀತಿಗಾಗಿ ಬಾಧೆಯನ್ನನುಭವಿಸುವುದು
ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ.
ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?
ಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದು
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
ಕಡೆ ಮಾತುಗಳು
ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.