Compreensão
A verdadeira compreensão vem de Deus. Os caminhos do Senhor são mais altos que os nossos. Mas Ele nos convida a buscar entendimento — e promete iluminar quem o busca de coração.
A sabedoria de Deus
Os meus pensamentos não são os vossos pensamentos. A incompreensibilidade de Deus nos leva à humildade e adoração.
ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ,
ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ.
ದೇವರ ಮೇಲೆ ಗುಣುಗುಟ್ಟುವವರನ್ನು ಖಂಡಿಸುವುದು
ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ!
ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?
ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ?
ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ.
ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ.
ಯೆಹೋವನು ಮಹೋನ್ನತನೂ, ಮಹಾಸ್ತುತಿಪಾತ್ರನೂ ಆಗಿದ್ದಾನೆ,
ಆತನ ಮಹತ್ತು ಅಪಾರವಾದದ್ದು.
ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ,
ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ,
ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ
ಗತಿಸಿಹೋದ ನಿನ್ನೆಯ ದಿನದಂತೆಯೂ,
ರಾತ್ರಿಯ ಜಾವದಂತೆಯೂ ಇವೆ.
ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
Buscar entendimento
Clama a mim e responder-te-ei. A sabedoria é a coisa principal — busque o entendimento com todo o coração.
‘ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ, ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.
ಜ್ಞಾನವನ್ನು ಪಡೆಯಬೇಕೆಂಬುದೇ ಜ್ಞಾನಬೋಧೆಯ ಪ್ರಥಮಪಾಠ,
ನಿನ್ನ ಎಲ್ಲಾ ಸಂಪತ್ತಿನಿಂದಲೂ ವಿವೇಕವನ್ನು ಪಡೆ.
ದೀರ್ಘಶಾಂತನು ಕೇವಲ ಬುದ್ಧಿವಂತನು,
ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ,
ಯೆಹೋವನ ಸಂಕಲ್ಪವೇ ಈಡೇರುವುದು.
ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ,
ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.
Iluminação divina
A entrada da tua Palavra dá luz e entendimento. Deus revela verdades ocultas e transforma nossa visão da realidade.
ನಿನ್ನ ವಾಕ್ಯವಿವರಣೆ ಬೆಳಕನ್ನು ಕೊಡುತ್ತದೆ,
ಸರಳ ಹೃದಯರಿಗೆ ವಿವೇಚನೆಯನ್ನು ನೀಡುತ್ತದೆ.
ಯೆಹೋವನು, "ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು" ಎಂದು ಅನ್ನುತ್ತಾನಲ್ಲಾ.
ಗಾಳಿಯ ಮಾರ್ಗವನ್ನೂ,
ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ,
ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ,
ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ.
ಯೇಸು ಅವನಿಗೆ, "ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು," ಎಂದು ಉತ್ತರ ಕೊಟ್ಟನು.
ಯೇಸು ಅವರನ್ನು ದೃಷ್ಟಿಸಿ ನೋಡಿ "ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ" ಅಂದನು.
ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, "ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು" ಎಂದು ಹೇಳಿ,
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ. ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.
ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ "ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು" ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.