Comunhão com Deus
A comunhão com Deus é o propósito supremo da existência humana. Fomos criados para viver em intimidade com o Criador — e em Cristo, esse acesso é plenamente restaurado.
Em comunhão com Deus
Deus é fiel, pelo qual fostes chamados à comunhão de seu Filho. A comunhão com Deus é dom da graça e fruto da redenção.
ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.
ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?
ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.
ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ:
"ನಾನು ಅವರೊಂದಿಗೆ ವಾಸಿಸುವೆನು,
ಅವರ ಮಧ್ಯದಲ್ಲಿ ತಿರುಗಾಡುವೆನು.
ನಾನು ಅವರಿಗೆ ದೇವರಾಗಿರುವೆನು
ಮತ್ತು ಅವರು ನನ್ನ ಜನರಾಗಿರುವರು."
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು. ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ: ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ.
Presença divina
Eis que estou à porta e bato. O Senhor fez sua morada entre nós — e toda a criação é convidada à comunhão eterna.
ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.
ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.
ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ," ಎಂದರು.
"ಆದರೆ ಇವರಿಗಾಗಿ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನಲ್ಲಿ ನಂಬುವವರಿಗಾಗಿಯೂ ಬೇಡಿಕೊಳ್ಳುತ್ತೇನೆ. ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರುವಂತೆ ನೀವು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.
Viver na comunhão
Quem permanece nele e ele no Senhor, esse dá muito fruto. A comunhão com Deus produz transformação e alegria.
ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.
ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.
ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.
ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.
ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ. ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.
ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.
ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.