Comunhão com os irmãos
A comunhão com os irmãos é marca da igreja verdadeira. Os cristãos primevos perseveravam na comunhão — partindo pão, orando e encorajando-se mutuamente.
Comunhão verdadeira
Perseveravam na doutrina dos apóstolos e na comunhão. A comunhão autêntica envolve amor sacrificial e acolhimento mútuo.
ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.
ವಿಶ್ವಾಸಿಗಳ ಅನ್ಯೋನ್ಯತೆ
ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು, ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು. ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು. ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು. ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು. ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.
ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ. ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.
ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು!
ಎಷ್ಟೋ ರಮ್ಯವಾದದ್ದು!
ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ,
ಆರೋನನ ಗಡ್ಡದ ಮೇಲೆ ಇಳಿದು,
ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ
ಅಮೂಲ್ಯ ತೈಲದ ಹಾಗೆ ಇರುತ್ತದೆ.
ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ
ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ.
ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ,
ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.
ದೇವರ ಆಲಯಕ್ಕೆ ಆರಾಧಕರ
ಗುಂಪಿನೊಂದಿಗೆ ನಾವಿಬ್ಬರೂ
ನಡೆದು ಹೋಗುವಾಗ
ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು.
ಒಬ್ಬನಿಗಿಂತ ಇಬ್ಬರು ಲೇಸು,
ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:
ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು.
ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ
ಅವನ ಗತಿ ದುರ್ಗತಿಯೇ
ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.
ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ.
ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?
ಒಬ್ಬಂಟಿಗನ ಮೇಲೆ ಜಯ ಸಾಧಿಸಲು,
ಇಬ್ಬರು ಎದುರಾಗಿ ನಿಲ್ಲಬಹುದು.
ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.
Amor fraternal
Amai-vos com amor fraternal sincero. Encorajem-se mutuamente e carreguem os fardos uns dos outros.
ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.
ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.
ಕ್ರಿಸ್ತನ ದೀನತೆಯ ಅನುಸರಣೆ
ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ, ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.
ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.
ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.
ಪವಿತ್ರಾತ್ಮರಿಗೆ ಅನುಗುಣವಾಗಿ ನಡೆಯತಕ್ಕದ್ದು
ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.
ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.
ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ. ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
ಅಂತಿಮ ವಂದನೆಗಳು
ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.
"ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.