A comunhão
A comunhão cristã é dom e mandamento. Juntos somos mais fortes. A Bíblia celebra a unidade dos crentes em Cristo como antecipação do céu na terra.
ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.
ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ. ನಿಮ್ಮೊಳಗೆ ಪರಸ್ಪರ ಪ್ರೀತಿಯಿರುವುದಾದರೆ ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು" ಎಂದನು.
ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು. ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು. ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು. ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಸೇರಬೇಕೆಂದು ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ. ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡಲೂ ಆತನ ಮಗನಾದ ಯೇಸು ಕ್ರಿಸ್ತನ ಸಂಗಡಲೂ ಇರುವಂಥದ್ದಾಗಿದೆ.
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ,
ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು.
ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು.
ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ,
ಅವನ ಗತಿ ದುರ್ಗತಿಯೇ.
ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ,
ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ
ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು.
ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
Este artigo te tocou? Faça uma oração!
+581 estão orando agora.
Junte-se à corrente de oração.